ಎನ್ ಶಾಮೀದ್ ತಾವರಗೇರಾ
ತಾವರಗೇರಾ: ಬಡಮಕ್ಕಳಿಗೆ ಉತ್ತಮ ಹಾಗೂ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಉದ್ದೇಶ ವಾಗಿದ್ದು, ಆ ನಿಟ್ಟಿನಲ್ಲಿ ಕೆಲಸ ನಿರ್ವಹಣೆ ಮಾಡಲು ಪಾಲಕರು ಹಾಗೂ ಶಿಕ್ಷಕರು ಮುಂದೆ ಬರಬೇಕು ಎಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಹೇಳಿದರು. ಅವರು ಮಂಗಳವಾರ ದಂದು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮೈಕ್ರೋ ಯೋಜನೆ ಅಡಿಯಲ್ಲಿ ಸರಕಾರಿ ಮಾಧ್ಯಮಿಕ ಮತ್ತು ಬಾಲಕಿಯರ ನೂತನ ಶಾಲಾ ಕೊಠಡಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಒಟ್ಟು 2ಕೋಟಿ 45ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಉತ್ತಮ ಕಟ್ಟಡಗಳನ್ನು ತಾವು ಬಳಸಿಕೂಂಡು ಗುಣಮಟ್ಟದ ಶಿಕ್ಷಣ ಪಡೆದುಕೊಂಡಾಗ ಮಾತ್ರ ಸರ್ಕಾರದ ಉದ್ದೇಶ ಈಡೇರುತ್ತದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಪಂ ಅಧ್ಯಕ್ಷ ವಿಕ್ರಮ್ ರಾಯ್ಕರ್ ಮಾತನಾಡಿ ಶಿಕ್ಷಣ ಪಡೆಯುವಲ್ಲಿ ವಿದ್ಯಾರ್ಥಿಗಳು ಯಶಸ್ವಿಯಾಗಿ ಶಾಲೆಗೆ ಹಾಗೂ ಪಟ್ಟಣಕ್ಕೆ ಕೀರ್ತಿ ತರಬೇಕೆಂದು ಹೇಳಿದರು.
ಕಾರ್ಯಕ್ರಮದ ನಿರೂಪಣೆ ಯನ್ನು ಜೀವನ್ ಸಾಬ ಬಿನ್ನಾಳ ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಜಿಲ್ಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜಶೇಖರ, ಕ್ಷೇತ್ರ ಶಿಕ್ಷಣಾಧಿಕಾರಿ ಎಮ್ ಚನ್ನಬಸಪ್ಪ, ಡಾ ಎಸ್ ಎಸ್ ಪೋರೆ, ಪಟ್ಟಣ ಪಂಚಾಯಿತಿ ಸದಸ್ಯರಾದ ನಾರಾಯಣ ಗೌಡ ಮೆದಿಕೇರಿ, ಅಯೂಭ್ ಖಾನ್, ವೀರನಗೌಡ ಪಾಟೀಲ್, ಮುಖಂಡರಾದ ವೀರಭದ್ರಪ್ಪ ನಾಲತವಾಡ, ಡಾ. ಶಾಮೀದ್ ದೊಟಿಹಾಳ, ಬಸನಗೌಡ ಮಾಲಿಪಾಟೀಲ, ದುರುಗೇಶ ನಾರಿನಾಳ, ಅಮರೇಶ ಗಾಂಜಿ, ವಿರೇಶ ತಾಳಿಕೋಟಿ, ರುದ್ರಗೌಡ ಪಾಟೀಲ, ಆನಂದ ಭಂಡಾರಿ, ಎಸ್ ಡಿ ಎಮ್ ಸಿ ಅಧ್ಯಕ್ಷ ರಾಮಣ್ಣ ಭೋವಿ, ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಜಿಲ್ಲಾ ಉಪಾಧ್ಯಕ್ಷೆ ಗುರುಪಾದಮ್ಮ ಭಂಡಾರಿ, ಪದವಿ ಪೂರ್ವ, ಪ್ರೌಢಶಾಲಾ, ಪ್ರಾಥಮಿಕ ಶಾಲೆಗಳ ಮುಖ್ಯ ಗುರುಗಳು ಹಾಗೂ ಶಿಕ್ಷಕರು ಸೇರಿದಂತೆ ಸಿಬ್ಬಂದಿ ವರ್ಗದವರು ಇದ್ದರು.