ಉದಯ ವಾಹಿನಿ :-
ಕವಿತಾಳ :
ವಿಶ್ವ ವನ್ನು ಅಲ್ಲದೇ ಭಾರತವನ್ನು ಪೋಲಿಯೊ ಮುಕ್ತ ದೇಶವನ್ನಾಗಿ ಮಾಡಲು ಎಲ್ಲರೂ ಕೈಜೋಡಿಸಬೇಕಾಗಿದೆ ಎರಡು ಹನಿ ಪೋಲಿಯೊ ನಮ್ಮ ಬದುಕಿಗೆ ಸಂಜೀವಿನಿಯಾಗಿ ಕೆಲಸ ಮಾಡುತ್ತದೆ ಈಗಾಗಲೇ ದೇಶದಲ್ಲಿ ಪೋಲಿಯೊ ನಿರ್ಮೂಲನವಾಗಿದೆ ಇಲ್ಲಿಯವರೆಗೆ ಯಾವುದೇ ಪ್ರಕರಣಗಳು ಕಂಡು ಬಂದಿರುವುದಿಲ್ಲ ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಭವಿಷ್ಯದಲ್ಲಿ ಪೋಲಿಯೊ ಬರದೇ ಇರುವ ಹಾಗೆ ನೋಡಿಕೊಳ್ಳಿ ಪ್ರತಿಯೊಬ್ಬ ತಾಯಂದಿರು 5 ವರ್ಷದೊಳಗಿನ ತಮ್ಮ ಮಕ್ಕಳಿಗೆ ಎರಡು ಹನಿ ಪೋಲಿಯೊ ಲಸಿಕೆ ಹಾಕಿಸಿ ಡಾ ಪರಶುರಾಮ ಸಿಂಗ್ ಎಂದು ಹೇಳಿದರು.
ಕವಿತಾಳ ಪಟ್ಟಣ ಸಮೀಪದ ತೋರಣದಿನ್ನಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಪೊಲೀಯೊ ಲಸಿಕೆ ಕಾರ್ಯಕ್ರಮಕ್ಕೆ ತಾಲ್ಲೂಕು ಪಂಚಾಯತ ಸದಸ್ಯ ಶಿವಕುಮಾರ್ ಮಿಟ್ಟಿಮನಿ ಮತ್ತು ತೋರಣದಿನ್ನಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ಪರಶುರಾಮ ಸಿಂಗ್ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು ಸರ್ಕಾರ ಹಮ್ಮಿಕೊಂಡಿರುವ ಪೋಲಿಯೋ ಲಸಿಕೆ ಕಾರ್ಯಕ್ರಮದಲ್ಲಿ ಐದು ವರ್ಷದ ಒಳಗಿನ ಪ್ರತಿಯೊಂದು ಮಗುವಿಗೂ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಪಾಲಕರು ತಮ್ಮ ತಮ್ಮ ಮಕ್ಕಳಿಗೆ ಪೋಲಿಯೋ ಬೂತ್ ಗೆ ಕರೆದುಕೊಂಡು ಬಂದು ತಪ್ಪದೆ ಲಸಿಕೆ ಹಾಕಿಸಬೇಕು ಎಂದರು.
ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಇತರರಿದ್ದರು.