ವರದಿ ಎನ್ ಶಾಮೀದ್ ತಾವರಗೇರಾ
ತಾವರಗೇರಾ: ಮುದೇನೂರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಬೆಳಗಿನ ಜಾವ ಕಳ್ಳರು ಬೀಗ ಮುರಿದು 8 ಕಂಪ್ಯೂಟರ್ ಕಳ್ಳತನ ಮಾಡಿದ ಘಟನೆ ನಡೆದಿದೆ.
ಮಂಗಳವಾರ ಬೆಳಿಗ್ಗೆ ಶಾಲೆ ತೆರೆಯುತ್ತಿದ್ದಂತೆ, ಕಳ್ಳತನವಾದ ಬಗ್ಗೆ ಶಾಲಾ ಶಿಕ್ಷಕರು ತಾವರಗೇರಾ ಪೊಲೀಸ್ ಠಾಣೆ ಗೆ ದೂರು ಸಲ್ಲಿಸಿದ ಹಿನ್ನಲೆಯಲ್ಲಿ ಸ್ಥಳಕ್ಕೆ ಪಿಎಸ್ಐ ಗೀತಾಂಜಲಿ ಶಿಂಧೆ ಹಾಗೂ ಸಿಬ್ಬಂದಿ ವರ್ಗ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಒಟ್ಟು 2 ಲಕ್ಷ ರೂ ಮೌಲ್ಯದ ಕಂಪ್ಯೂಟರ್ ಗಳು ಕಳ್ಳತನವಾದ ಬಗ್ಗೆ ದೂರು ದಾಖಲಿಸಿಕೊಂಡು ತನಿಕೆ ಕೈಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಶ್ವಾನದಳದ ತಂಡದವರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು.