ವರದಿ : ನಾಗರಾಜ್ ಎಸ್ ಮಡಿವಾಳರ್
ಮುದಗಲ್ : ಪಟ್ಟಣದಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ದಿನನಿತ್ಯ ಬಳಸುವ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದು,ಜನ ಸಾಮಾನ್ಯರಿಗೆ ಮತ್ತು ಬಡವರಿಗೆ ತುಂಬಾ ಹೊರೆಯಾಗಿದೆ. ಜನಸಾಮಾನ್ಯರು ಲಾಕ್ ಡೌನ್ ನಂತಹ ಸಂದಿಗ್ಧ ಪರಿಸ್ಥಿತಿಯಿಂದ ಈಗತಾನೆ ಹೊರಬಂದಿದ್ದು, ದುಡಿಯುವ ಕೈಗಳಿಗೆ ಕೆಲಸವಿಲ್ಲದೇ ಜನರು ತತ್ತರಿಸಿ ಹೋಗಿದ್ದಾರೆ.ಆದರೆ ಕೇಂದ್ರ ಸರ್ಕಾರ ಬಜೆಟ್ ಮಂಡನೆಯಲ್ಲಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ.ಬಸ್ ಟಿಕೇಟ್ ದರ,ಖಾಸಗಿ ವಾಹನಗಳ ಬಾಡಿಗೆ ದರ ಸೇರಿ ಜನ ಸಾಮಾನ್ಯರಿಗೆ ಹೊರೆಯಾಗಿದೆ. ಬಡವರಿಗೆ ವರದಾನ ಆಗುವಂತಹ ಯೋಜನೆಗಳನ್ನು ಸರ್ಕಾರ ರೂಪಿಸಬೇಕೆ ವಿನಹ ಬಡವರಿಗೆ ಹೊರೆಯಾಗುವಂತಹ ಕಾರ್ಯಕ್ಕೆ ಮುಂದಾಗಿರುವುದು ದುರಂತವೇ ಸರಿ ಎಂದು ಎಸ.ಎ.ನಯೀಮ್ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ಹಾಗೂ ದಲಿತ ಪರ ಸಂಘಟನೆಗಳು ಮುದಗಲ್ ಉಪ ತಹಶಿಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು.