ವರದಿ ಎನ್ ಶಾಮೀದ್ ತಾವರಗೇರಾ
ಕೊಪ್ಪಳ: ಇತ್ತೀಚಿನ ದಿನಗಳಲ್ಲಿಕೊಪ್ಪಳ ಜಿಲ್ಲೆಯಲ್ಲಿ ನಕಲಿ ಬಂಗಾರವನ್ನು ತೋರಿಸಿ ಅಸಲಿ ಬಂಗಾರವೆಂದು ನಂಬಿಸಿ ಸಾರ್ವಜನಿಕರಿಗೆ ಮಾರಾಟ ಮಾಡಿ ಮೋಸ ಮಾಡುವ ವಂಚಕರ ಜಾಲ ಸಕ್ರಿಯವಾಗಿರುವ ಬಗ್ಗೆ ಮಾಹಿತಿಯಿದ್ದು ಕಾರಣ ಸಾರ್ವಜನಿಕರು ಇಂತಹ ಯಾವುದೇ ಆಮಿಷ ಮತ್ತು ವಂಚನೆಗೆ ಒಳಗಾಗಬಾರದೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ ಶ್ರೀಧರ್ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು
ಜಿಲ್ಲೆಯಲ್ಲಿ ಇಂಥ ವಂಚಕರ ಜಾಲ ಬಂದಿರುವ ಮಾಹಿತಿ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಇಂತಹ ವಂಚಕರು ಕಂಡುಬಂದಲ್ಲಿ ಅಥವಾ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಸಮೀಪದ ಠಾಣಾ ಅಧಿಕಾರಿಗಳಿಗೆ ಮಾಹಿತಿ ನೀಡಬೇಕೆಂದು ಮತ್ತು ಇಂತಹ ವ್ಯಕ್ತಿಗಳು ಕಂಡುಬಂದಲ್ಲಿ 112 ನಂಬರಿಗೆ ಕರೆ ಮಾಡಬೇಕೆಂದು ತಿಳಿಸಿದ್ದಾರೆ.