ವರದಿ ಎನ್ ಶಾಮೀದ್ ತಾವರಗೇರಾ
ತಾವರಗೇರಾ: ಪಟ್ಟಣ ಸೇರಿದಂತೆ ಹೋಬಳಿಯಾದ್ಯಂತ ಇತ್ತೀಚೆಗೆ ಸರಗಳ್ಳತನ ಹಾಗೂ ಮನೆ ಬೀಗ ಒಡೆಯುವಂತ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದಕ್ಕೆ ಸಾರ್ವಜನಿಕರು ಎಚ್ಚರದಿಂದಿರಬೇಕು ಎಂದು ಪೊಲೀಸ್ ಇಲಾಖೆ ಪ್ರಕಟಣೆ ಮೂಲಕ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದೆೆ.
ಈ ಕುರಿತು ಶುಕ್ರವಾರದಂದು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕರಪತ್ರ ಹಂಚುವ ಮೂಲಕ ಪೋಲಿಸರು ಸಾರ್ವಜನಿಕರಿಗೆ ಮಾಹಿತಿ ನೀಡಿದರು, ಇದೇ ಸಂದರ್ಭದಲ್ಲಿ ಎ ಎಸ್ ಆಯ್ ಬಸವರಾಜ್ ನಾಯಕವಾಡಿ ಮಾತನಾಡಿ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳುವುದೇನೆಂದರೆ ಹಗಲು ಹೊತ್ತಿನಲ್ಲಿಯೇ ಒಂಟಿ ಮಹಿಳೆಯನ್ನು ಕಂಡ ದುಷ್ಕರ್ಮಿಗಳು ಹೂಂಚು ಹಾಕಿ ಸರಗಳ್ಳತನ ದಂತ ಪ್ರಕರಣದ ಹಿನ್ನೆಲೆಯಲ್ಲಿ ಸ್ಥಳೀಯ ಠಾಣಾಧಿಕಾರಿ ಇವರ ಮಾರ್ಗದರ್ಶನದಂತೆ ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಠಾಣೆಗೆ ದೂರು ದಾಖಲಿಸಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಿಬ್ಬಂದಿಗಳಾದ ಬಸವರಾಜ್ ಇಂಗಳದಾಳ ಹಾಗೂ ಶರಣಪ್ಪ ಮಡಿವಾಳ ಇದ್ದರು.