Friday , September 20 2024
Breaking News
Home / Breaking News / ತಾವರಗೇರಾದಲ್ಲಿ ಸಂಭ್ರಮದ ರಥೋತ್ಸವ..

ತಾವರಗೇರಾದಲ್ಲಿ ಸಂಭ್ರಮದ ರಥೋತ್ಸವ..

 

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಪಟ್ಟಣದ ಆರಾಧ್ಯ ದೈವ ಶ್ರೀ ತ್ರೀ ವೀರಭದ್ರೇಶ್ವರ ಮಹಾರಥೋತ್ಸವವು ಸಂಭ್ರಮದಿಂದ ಜರುಗಿತು.
ಕಳೆದ ಎರಡು ದಿನಗಳಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ ಗಳು ಜರುಗಿದವು.
ಶುಕ್ರವಾರ ಸಂಜೆ ನಡೆದ ರಥೋತ್ಸವ ಕಾರ್ಯಕ್ರಮದಲ್ಲಿ ಯಲಬುರ್ಗಾದ ಶ್ರೀಧರ ಮುರಡಿ ಮಠದ ಬಸವಲಿಂಗ ಶಿವಾಚಾರ್ಯ ಸ್ವಾಮಿಗಳು, ಚಂದ್ರಶೇಖರ ಸ್ವಾಮಿಗಳಿಂದ ಪ್ರವಚನ ಹಾಗೂ ಧಾರ್ಮಿಕ ಗೋಷ್ಠಿ ಗಳು ಜರುಗಿದವು.

ರಥೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ, ಪಪಂ ಅಧ್ಯಕ್ಷ ವಿಕ್ರಮ್ ರಾಯ್ಕರ್, ಜಾತ್ರಾ ಸಮಿತಿ ಮುಖಂಡರಾದ ಶೇಖರಗೌಡ ಪೊಲೀಸ್ ಪಾಟೀಲ್ ಹಾಗೂ ಜಾತ್ರಾ ಸಮಿತಿಯ ಸರ್ವ ಸದಸ್ಯರು ಹಾಗೂ ಪಟ್ಟಣದ ಪ್ರಮುಖರು ಮತ್ತು ಪಟ್ಟಣದ ಸಾವಿರಾರು ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡಿದ್ದರು.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!