ವರದಿ ಎನ್ ಶಾಮೀದ್ ತಾವರಗೇರಾ
ತಾವರಗೇರಾ ಪಟ್ಟಣದ ವಿವಿಧ ವಸತಿ ಶಾಲೆಗಳಿಗೆ ಪಪಂ ಅಧ್ಯಕ್ಷ ವಿಕ್ರಮ್ ರಾಯ್ಕರ್ ಹಾಗೂ ಸ್ಥಾಯಿಸಮಿತಿ ಅಧ್ಯಕ್ಷ ಅಯ್ಯೂಬ್ ಖಾನ್ ಪಠಾಣ್ ಭೇಟ್ಟಿ ನೀಡಿದರು.
ಪಟ್ಟಣದ ಮೋರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟ್ಟಿ ನೀಡಿದ ಅಧ್ಯಕ್ಷ ವಿಕ್ರಮ್ ರಾಯ್ಕರ್ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ ಅಯ್ಯೂಬ್ ಖಾನ್ ಪಠಾಣ್ ಅವರು ವಿದ್ಯಾರ್ಥಿಗಳೊಂದಿಗೆ ಕೆಲವೊತ್ತು ಚರ್ಚಿಸಿ ವಸತಿ ನಿಲಯಗಳಲ್ಲಿರುವ ಮೂಲಭೂತ ಸಮಸ್ಯೆಗಳನ್ನು ಆಲಿಸಿದರು. ಶುದ್ಧ ಕುಡಿಯುವ ನೀರಿನ ಸಮಸ್ಯೆ, ಅಡುಗೆ ರುಚಿ, ಶುಚಿಯಾಗಿರುವದಿಲ್ಲ ಎಂದು ವಿದ್ಯಾರ್ಥಿಗಳು ಅಧ್ಯಕ್ಷರ ಗಮನಕ್ಕೆ ತಂದರು.
ನಂತರ ಇಲ್ಲಿರುವ ಅವ್ಯವಸ್ಥೆಯ ಕುರಿತು ವಸತಿ ನಿಲಯದ ಪ್ರಾಚಾರ್ಯ ಸೌಭಾಗ್ಯಶ್ರೀ, ಮೇಲ್ವಿಚಾರಕ ತೊಂಡೆಪ್ಪಗೌಡ ರವರಿಗೆ ಅಧ್ಯಕ್ಷರು ಒಂದು ವಾರದೊಳಗೆ ಮೂಲಭೂತ ಸೌಕರ್ಯಗಳನ್ನು ವಿದ್ಯಾರ್ಥಿಗಳಿಗೆ ಒದಗಿಸಿ ಅನುಕೂಲ ಮಾಡಿಕೊಡುವಂತೆ ಹಾಗೂ ವಸತಿ ನಿಲಯದಲ್ಲಿ ಖಾಲಿ ಇರುವ ಅಡುಗೆ ಸಹಾಯಕರ ನ್ನು ಭರ್ತಿ ಮಾಡಿಕೊಳ್ಳುವಂತೆ ಸೂಚಿಸಿದರು.
ಕಿತ್ತೂರರಾಣಿ ಚನ್ನಮ್ಮ ಬಾಲಕಿಯರ ವಸತಿ ಶಾಲೆ : ಅಧ್ಯಕ್ಷ ವಿಕ್ರಮ್ ರಾಯ್ಕರ್ ಹಾಗೂ ಸ್ಥಾಯಿಸಮಿತಿ ಅಧ್ಯಕ್ಷ ಅಯ್ಯೂಬ್ ಖಾನ್ ಪಠಾಣ್ ಭೇಟ್ಟಿ ನೀಡಿ ವಸತಿ ನಿಲಯದ ವಿದ್ಯಾರ್ಥಿಗಳೊಂದಿಗೆ ಸಮಸ್ಯೆಗಳನ್ನು ಆಲಿಸಿದರು. ವಸತಿ ನಿಲಯದಲ್ಲಿ ಖಾಲಿ ಇರುವ ದೈಹಿಕ ಶಿಕ್ಷಕ ಮತ್ತು ಪ್ರಥಮ ದರ್ಜೆ ಸಹಾಯಕ ಈ ಎರಡು ಹುದ್ದೆಗಳನ್ನು ಮುಂದಿನ ದಿನಮಾನಗಳಲ್ಲಿ ಭರ್ತಿ ಮಾಡಿ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ಪ್ರಾಚಾರ್ಯ ನಾಗರಾಜ ಸಂಗನಾಳ ಅವರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಪಟ್ಟಣದ ವಿವಿಧ ಗಣ್ಯರು ಇದ್ದರು.