ವರದಿ : ನಾಗರಾಜ್ ಎಸ್ ಮಡಿವಾಳರ್
ಮುದಗಲ್ : ರಾಜ್ಯದಲ್ಲಿ ಇತ್ತೀಚೆಗೆ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಕಾರಣಕ್ಕೆ ಮಾಸ್ಕ್ ಧರಿಸದೆ ತಿರುಗಾಡುವವರು, ಅಂತರ ಕಾಯ್ದುಕೊಳ್ಳದಿರುವುದು ಸೇರಿದಂತೆ ಕೊರೊನಾ ಸೋಂಕು ತಡೆಗಟ್ಟುವ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರಿಗೆ ಮುದಗಲ್ ಪುರಸಭೆ ದಂಡದ ಬಿಸಿ ತೋರಿಸುತ್ತಿದೆ. ರಾಯಚೂರು ಜಿಲ್ಲಾಧಿಕಾರಿಗಳ ಆದೇಶದಂತೆ ಮುದಗಲ್ ಪುರಸಭೆ ಪಟ್ಟಣದಲ್ಲಿ ಕೋವಿಡ್ 19 ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿ, ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ಜಿಲ್ಲಾಧಿಕಾರಿಗಳ ಆದೇಶ ಉಲ್ಲಂಘಿಸಿ ಮಾಸ್ಕ್ ಧರಿಸದೆ ಬೇಜವಾಬ್ದಾರಿತನ ತೋರುವವರಿಗೆ ದಂಡ ವಿಧಿಸಲಿದ್ದಾರೆ ದಂಡದ ಕಾರ್ಯಾಚರಣೆಗಾಗಿ ಪುರಸಭೆ ಸಿಬ್ಬಂದಿಗಳ ತಂಡಗಳನ್ನು ರಚನೆ ಮಾಡಲಾಗಿದ್ದು, ಈ ತಂಡಗಳು ನಿತ್ಯ ಪಟ್ಟಣದಲ್ಲಿ ಸಂಚರಿಸಿ ಮಾಸ್ಕ್ ಧರಿಸದೆ ಬೇಜವಾಬ್ದಾರಿ ತೋರಿದವರಿಂದ 100 ದಂಡ ವಸೂಲಿ ಮಾಡಲಿದ್ದಾರೆ. ಸಾರ್ವಜನಿಕರು ಮಾಸ್ಕ್ ಧರಿಸಿ ಕರೋನ ಮಹಾಮಾರಿಯ ವಿರುದ್ಧದ ಹೋರಾಟಕ್ಕೆ ಸಹಕರಿಸಬೇಕು ಬೇಜವಾಬ್ದಾರಿ ತೋರಿದರೆ ದಂಡ ವಿಧಿಸಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಮರಿಲಿಂಗಪ್ಪ ಖಡಕ್ ಸೂಚನೆ ನೀಡಿದ್ದಾರೆ.