ವರದಿ : ನಾಗರಾಜ್ ಎಸ್ ಮಡಿವಾಳರ್
ಮಸ್ಕಿ : ತಾಲೂಕಿನ ಮರಕಮದಿನ್ನಿಯ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ ಮತದಾನದ ಕುರಿತು ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮರಕಮದಿನ್ನಿ ಗ್ರಾಮದಲ್ಲಿ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಈ ಜಾಥಾವು ಗ್ರಾಮದ ಎಲ್ಲಾ ಭಾಗಗಳಿಗೂ ಸಂಚರಿಸಿ ಮತದಾರರಲ್ಲಿ ಮತದಾನದ ಪ್ರಾಮುಖ್ಯತೆಯ ಕುರಿತು ಹರಿವು ಮೂಡಿಸುವ ಪ್ರಯತ್ನ ಮಾಡಿತು.
ಮರಕಮದಿನ್ನಿಯ ಸರ್ಕಾರಿ ಪ್ರೌಢ ಶಾಲೆಯ ಮತದಾರರ ಸಾಕ್ಷರತಾ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಎರಡನೇ ದಿನದ ಮತದಾನದ ಕುರಿತ ಜಾಗೃತಿ ಜಾಥಾವನ್ನು ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶ್ರೀ ಈರಣ್ಣನವರು ಡೊಳ್ಳು ಹೊಡೆಯುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಲೆಯ ಮುಖೋಪಾಧ್ಯಾಯರಾದ ಶ್ರೀಮತಿ ಕಮಲಾಕ್ಷಿ ಕೆ, ಸಮಾಜ ವಿಜ್ಞಾನ ಶಿಕ್ಷಕರಾದ ಉರುಕುಂದಪ್ಪ, ನೋಡಲ್ ಅಧಿಕಾರಿಗಳು ಮತ್ತು ಎಲ್ಲಾ ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.