ವರದಿ ಎನ್ ಶಾಮೀದ್ ತಾವರಗೇರಾ
ಬೆಂಗಳೂರು : ನಗರದಲ್ಲಿ ಶುಕ್ರವಾರದಂದು ನಡೆದ ಪೋಲಿಸ್ ಧ್ವಜಾ ದಿನಾಚರಣೆ ಕಾರ್ಯಕ್ರಮದಲ್ಲಿ 2020 ನೇ ಸಾಲಿನಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಣೆಗಾಗಿ ನೀಡಲಾಗುವ ಮುಖ್ಯ ಮಂತ್ರಿ ಚಿನ್ನದ ಪದಕಕ್ಕೆ ಭಾಜನರಾದ ಸ್ಥಳೀಯ ಠಾಣಾಧಿಕಾರಿ ಗೀತಾಂಜಲಿ ಶಿಂಧೆ ಮುಖ್ಯಮಂತ್ರಿ ಗಳಿಂದ ಚಿನ್ನದ ಪದಕ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ, ಹಾಗೂ ಪೊಲೀಸ್ ಇಲಾಖೆಯ ಮೇಲಾಧಿಕಾರಿಗಳು ಉಪಸ್ಥಿತರಿದ್ದರು.
ಮುಖ್ಯಮಂತ್ರಿಗಳ ಚಿನ್ನದ ಪದಕ ಪಡೆದ ಕೊಪ್ಪಳ ಜಿಲ್ಲೆ ಪ್ರಥಮ ಮಹಿಳಾ ಪಿಎಸ್ಐ ಎಂಬ ಕೀರ್ತಿಗೆ ಪಾತ್ರರಾಗಿದ್ದಕ್ಕಾಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಇಲಾಖೆಯ ಎಲ್ಲಾ ಉನ್ನತ ಅಧಿಕಾರಿಗಳು ಹಾಗೂ ಸ್ಥಳೀಯ ಠಾಣೆಯ ಸಿಬ್ಬಂದಿ ವರ್ಗದವರು ಜೊತೆಗೆ ಉದಯವಾಹಿನಿ ಕೂಡ ಅಭಿನಂದನೆ ಸಲ್ಲಿಸಿದ್ದಾರೆ.