ವರದಿ ಎನ್ ಶಾಮೀದ್ ತಾವರಗೇರಾ
ತಾವರಗೇರಾ: ಮಸ್ಕಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲುವ ಹತಾಶೆ ಯಿಂದಾಗಿ ಕಾಂಗ್ರೆಸ್ ಮುಖಂಡರು, ಬಿಜೆಪಿ ಯವರು ಹಣ ಹಂಚುತ್ತಿದ್ದಾರೆಂದು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ಅವರು ಶನಿವಾರ ಪಟ್ಟಣದ ಮೇಗಾ ರೆಸಿಡೆನ್ಸಿ ಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ನವರಿಗೆ ತಾಕತ್ತು ಇದ್ದರೇ ಕ್ಷೇತ್ರದ ಮತದಾರರ ಮನೆ ಮನೆಗೆ ತೆರಳಿ ಮತ ಕೇಳಿ ಜಯಗಳಿಸಿ ತೋರಿಸಲಿ ಎಂದು ಸವಾಲು ಹಾಕಿದ ವಿಜಯೇಂದ್ರ ಕಾಂಗ್ರೆಸ್ ನವರು ಬಿಜೆಪಿ ಕಾರ್ಯಕರ್ತರ ಮೇಲೆ ಗಲಾಟೆ ಮಾಡಿ ಗುಂಡಾ ವರ್ತನೆ ತೋರಿಸುತ್ತಿರುವುದು ಸರಿಯಾದ ವರ್ತನೆ ಅಲ್ಲ ಮುಖ್ಯಮಂತ್ರಿ ಯಡಿಯೂರಪ್ಪ ನವರ ಸಾಧನೆ ಗುರುತಿಸಿ ಮತದಾರರು ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ರನ್ನು ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಲಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ, ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿಟಿ ರವಿ, ಸಂಸದ ಸಂಗಣ್ಣ ಕರಡಿ, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ದೊಡ್ಡನಗೌಡ ಪಾಟೀಲ್, ಶಾಸಕರಾದ ಹಾಲಪ್ಪ ಆಚಾರ, ಪರಣ್ಣ ಮನವಳ್ಳಿ, ಮುಖಂಡರಾದ ಸಿವಿ ಚಂದ್ರಶೇಖರ, ಶರಣು ತಳ್ಳಿಕೇರಿ, ಜಿಲ್ಲಾ ಪಂಚಾಯತ ಸದಸ್ಯ ಕೆ ಮಹೇಶ್ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ನಿರಾಸೆ ಮುಡಿಸಿದ ಮುಖ್ಯಮಂತ್ರಿ ಯಡಿಯೂರಪ್ಪನವರು:-
ತಾವರಗೇರಾ ಪಟ್ಟಣಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ನವರು ಆಗಮಿಸುತ್ತಾರೆ ಎಂಬ ಸುದ್ದಿ ತಿಳಿದ ಅಭಿಮಾನಿಗಳು ಹಾಗೂ ಸಾರ್ವಜನಿಕರು ಪಟ್ಟಣದ ಸಿಂಧನೂರು ವೃತ್ತದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ನೆರೆದಿದ್ದರು ಆದರೆ ಯಡಿಯೂರಪ್ಪ ನವರು ಮುದುಗಲ್ ನಿಂದ ನೇರವಾಗಿ ಬಂದು ಕಾರಿನಿಂದ ಇಳಿಯದೇ ಹಾಗೆ ಹೋಗಿದ್ದು ನೋಡಲು ಬಂದಿದ್ದ ಅಭಿಮಾನಿಗಳಲ್ಲಿ ನಿರಾಸೆಗೆ ಕಾರಣವಾಯಿತು.