ಉದಯವಾಹಿನಿ :
ಕವಿತಾಳ :
ಪೊಲೀಸ್ ಇಲಾಖೆ ಸಾರ್ವಜನಿಕರ ಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದು, ಪೊಲೀಸರಿಗೆ ಈ ವಾಹನಗಳು ಮತ್ತಷ್ಟು ಬಲ ತುಂಬುತ್ತವೆ. ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಪಿಎಸ್ಐ ವೆಂಕಟೇಶ್. ಎಂ ಅವರು ಹೇಳಿದರು.
ಸಾರ್ವಜನಿಕರ ನೆರವಿಗೆ ನಿಲ್ಲಲು ಕೇಂದ್ರ ಸರ್ಕಾರ ರೂಪಿಸಿದ ಒಂದು ಅದ್ಭುತ ಯೋಜನೆ ಇದಾಗಿದೆ. ಇಡೀ ದೇಶದಲ್ಲಿ ರಾಜ್ಯಕ್ಕೆ ಹೆಚ್ಚಿನ ವಾಹನ ನೀಡಲಾಗಿದ್ದು .
ದೇಶದಲ್ಲಿ ನಡೆಯುವ ಕ್ರೈಂ ತಡೆಯುವ ಉದ್ದೇಶದಿಂದ ಈ ಸಹಾಯವಾಣಿಯನ್ನು ಶುರು ಮಾಡಲಾಗಿದೆ. ದೇಶದಾದ್ಯಂತ ಇದು ಕಾರ್ಯರೂಪಕ್ಕೆ ಬರಲಿದೆ. ಪಟ್ಟಣದ ಜನರಿಗೆ ಯಾವುದೇ ರೀತಿಯ ತೊಂದರೆಯಾದರೆ ತಕ್ಷಣ ಸ್ಪಂದಿಸುವ ಕೆಲಸ ಪೊಲೀಸ್ ಇಲಾಖೆಯಿಂದ ಆಗುತ್ತದೆ.
ನಿಮ್ಮ ಮಿತ್ರ ವಾಹನ ಸಿರವಾರ ಮತ್ತು ಕವಿತಾಳ ವ್ಯಾಪ್ತಿಯಲ್ಲಿ ಕಾರ್ಯನಿರ್ಹಿಸಲಿದೆ. 112 ನಂಬರ್ ಗೆ ಯಾವುದೇ ಫೋನ್ ಕಾಲ್ ಬಂದ 15 ಸೆಕೆಂಡನೊಳಗೆ ಜನರ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಲಾಗುತ್ತದೆ. ಪ್ರಾಮಾಣಿಕವಾಗಿ ಕೆಲಸ ಮಾಡುವ ಮೂಲಕ ಜನರಿಗೆ ನೆರವಾಗಿ ಎಂದರು. ತುರ್ತಾಗಿ ಸಮಸ್ಯೆಗೆ ಸ್ಪಂದಿಸುವ ನಿಟ್ಟಿನಲ್ಲಿ ವೇಗವಾಗಿ ವಾಹನ ಓಡಿಸಬೇಡಿ ಮತ್ತು ತಮ್ಮ ಇತಿಮಿತಿಯಲ್ಲಿಯೇ ಓಡಿಸಿ ಎಂದು ಸಲಹೆ ನೀಡಿದರು. ಪಟ್ಟಣದ ಜನರಿಗೆ ಇದೊಂದು ಸುವರ್ಣ ಅವಕಾಶ. ಇದನ್ನು ಎಲ್ಲರೂ ಉಪಯೋಗಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಎಎಸ್ಐ ವೀರುಪಾಕ್ಷಪ್ಪ ಮಾತನಾಡಿ ಒಂದು ಆ್ಯಪ್ ಮೂಲಕ ಈ ಸಹಾಯವಾಣಿ ಕಾರ್ಯ ನಿರ್ವಹಿಸಲಿದೆ. ಯಾವುದೇ ಒಬ್ಬ ವ್ಯಕ್ತಿ ಕರೆ ಮಾಡಿದ ತಕ್ಷಣ ಆ ವಾಹನದಲ್ಲಿರುವ ಪೊಲೀಸ್ ಅಧಿಕಾರಿ ಅವರ ಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡುತ್ತಾರೆ. ದಿನದ 24 ಗಂಟೆಯೂ ಇದು ಕೆಲಸ ಮಾಡುತ್ತದೆ.ಎಲ್ಲಾ ಜನರು ಇದರಿಂದ ಸದುಪಯೋಗ ಪಡಿಸಿಕೊಳ್ಳಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಎಸ್ಐ ಈರಣ್ಣ ಮತ್ತು ಪೊಲೀಸ್ ಸಿಬ್ಬಂದಿ ಹಾಗೂ ಇತರರು ಇದ್ದರು.