ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ———————–
ವರದಿ ಎನ್ ಶಾಮೀದ್ ತಾವರಗೇರಾ
ತಾವರಗೇರಾ: ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಮಹಾಮಾರಿ ಕರೊನಾ 2 ನೇ ಅಲೆ ಹೆಚ್ಚಾಗುತ್ತಿದ್ದು ಸೋಮುವಾರ ಒಂದೇ ದಿನ 20 ಪಾಸಿಟಿವ್ ಪ್ರಕರಣಗಳು ಬೆಳಕಿಗೆ ಬಂದಿರುವದು ಆಘಾತಕಾರಿ ವಿಷಯವಾಗಿದೆ ಇದುವರೆಗೂ ಪಟ್ಟಣದಲ್ಲಿ 69 ಪ್ರಕರಣ ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಲ್ಲಿ ಹಿಂದೇಟು ಹಾಕುತ್ತಿದ್ದು ಕರೊನಾ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. ಈಗಾಗಲೇ ಪಪಂ, ಕಂದಾಯ ಇಲಾಖೆ ಹಾಗೂ ಪೊಲೀಸ್ ರು ಜನರಲ್ಲಿ ಜಾಗೃತಿ ಮೂಡಿಸಿದರು ಕೂಡ ಜನತೆ ಎಚ್ಚೆತ್ತುಕೊಳ್ಳದಿರುವುದು ಆಘಾತಕಾರಿ ಯಾಗಿದೆ, ಇದರಿಂದ ಸಾರ್ವಜನಿಕರು ಸರ್ಕಾರದ ಕರೊನಾ ನಿಯಮಗಳನ್ನು ಪಾಲಿಸುವದರ ಜೊತೆಗೆ ಕೊವೀಡ್ ವ್ಯಾಕ್ಸಿನ್ ಹಾಕಿಸಿಕೊಳ್ಳಬೇಕೆಂದು ವೈದ್ಯಾಧಿಕಾರಿ ಡಾ|| ಕಾವೇರಿ ಶಾವಿ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.