ಪ್ರೀತಿಯ ಓದುಗ ದೊರೆಗಳೇ,
ಕರೋನವನ್ನ ಓಡಿಸುವುದು ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………….
ಉದಯ ವಾಹಿನಿ :
ಕವಿತಾಳ : ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ,
ಜಿಲ್ಲೆಯಲ್ಲಿ ಈಗಾಗಲೇ ಜನತಾ ಕಫ್ರ್ಯೂ ಜಾರಿಯಲ್ಲಿದೆ. ಆದರೂ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಕಡಿಮೆಯಾಗುತ್ತಿಲ್ಲ.
ಈ ಹಿನ್ನಲೆಯಲ್ಲಿ ಅಗತ್ಯ ವಸ್ತುಗಳು ಸೇರಿದಂತೆ ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ತರುವ ಕುರಿತು ಗಹನವಾದ ಚರ್ಚೆ ನಡೆಯುತ್ತಿದೆ. ಆ ರೀತಿ ಆದ ಪಕ್ಷದಲ್ಲಿ ಅಗತ್ಯ ವಸ್ತುಗಳನ್ನು ಖರೀದಿಸಲು ಸಾರ್ವಜನಿಕರಿಗೆ ಒಂದು ದಿನದ ಕಾಲಾವಕಾಶ ನೀಡಲಾಗುವುದು. ಅದಕ್ಕೂ
ಮುಖ್ಯವಾಗಿ ಇಂದಿನಿಂದ ಆಸ್ಪತ್ರೆಗಳು, ಔಷಧಿ, ಪೆಟ್ರೋಲ್ ಹೊರತು ಪಡಿಸಿದಂತೆ ಇತರೆ ಅಗತ್ಯ ಸೇವೆಗಳಿಗೆ ಬೆಳಿಗ್ಗೆ 10ರ ನಂತರ ಯಾವುದೇ ರೀತಿಯ ಅವಕಾಶವಿರುವುದಿಲ್ಲ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.