ಪ್ರೀತಿಯ ಓದುಗ ದೊರೆಗಳೇ,
ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………..
ಮುದಗಲ್: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಪಟ್ಟಣದ ಅಸಹಾಯಕ ಕುಟುಂಬಗಳಿಗೆ ಪ್ರತಿ ತಿಂಗಳು ರೂ. 1000 ಮಾಶಾಸನ ವಿತರಣೆ ಮಾಡಿದರು.
ಕೋವಿಡ್ ಸಂಕಷ್ಟದಿಂದ ಕರ್ನಾಟಕ ಸಂಪೂರ್ಣ ಲಾಕ್ ಡೌನ್ ಆಗಿರುವ ಕಾರಣ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ ತನ್ನೆಲ್ಲ ಕಾರ್ಯ ಚಟುವಟಿಕೆಗಳನ್ನು ಬಂದ್ ಮಾಡಿದೆ. ಹಿನ್ನೆಲೆಯಲ್ಲಿ ಅಸಹಾಯಕ ಕುಟುಂಬಗಳಿಗೆ ಪ್ರತಿ ತಿಂಗಳು ರೂ 750 ರಿಂದ್ 1000 ಮಾಶಾಸನವನ್ನು ಮುದಗಲ್ ಸೇವಾಕೇಂದ್ರದ ಸಿಬ್ಬಂದಿ ನಿಂಗನಗೌಡ ಅವರ ಮುಖಾಂತರ ವಿತರಣೆ ಮಾಡಿದರು.
ಸೇವಾ ಕೇಂದ್ರ ಬಂದ್ ಮಾಡಿದ ಹಿನ್ನೆಲೆಯಲ್ಲಿ ಮಾಶಾಸನ ಪಡೆಯುವ ಕುಟುಂಬಗಳಿಗೆ ತೊಂದರೆ ಆಗಬಾರದು ಎನ್ನುವ ನಿಟ್ಟಿನಲ್ಲಿ ಧರ್ಮಸ್ಥಳದ ಧರ್ಮಧಿಕಾರಿ. ಡಾ. ಡಿ ವೀರೇಂದ್ರ ಹೆಗ್ಗಡೆ ಯವರ ಆದೇಶದಂತೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ಎಲ್. ಎಚ್. ಮಂಜುನಾಥ್ ಅವರ ಸೂಚನೆಯಂತೆ ಇಡೀ ರಾಜ್ಯದಲ್ಲಿ ಕಾರ್ಯಕರ್ತರು ಮುಖಾಂತರ ಮನೆ ಭೇಟಿ ಮಾಡಿ ಮಾಶಾಸನ ವಿತರಣೆ ಮಾಡಿಸುತ್ತಿದ್ದಾರೆ ಎಂದು ರಾಯಚೂರು ಜಿಲ್ಲಾ ನಿರ್ದೇಶಕ ಸಂತೋಷ ತಿಳಿಸಿದರು.