ಪ್ರೀತಿಯ ಓದುಗ ದೊರೆಗಳೇ,
ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ ………………………………………………...
ವರದಿ ಎನ್ ಶಾಮೀದ್ ತಾವರಗೇರಾ
ತಾವರಗೇರಾ; ಲಾಕ್ ಡೌನ ಹಿನ್ನಲೆಯಲ್ಲಿ ಪಟ್ಟಣದ ಜನತೆ ಸಹಕಾರ ನೀಡುತ್ತಿದ್ದು ಮುಂದಿನ ದಿನಗಳಲ್ಲಿ ಕೂಡ ಇದೇ ರೀತಿ ಸಹಕಾರ ನೀಡಿ ಕಾನೂನು ನಿಯಮಗಳನ್ನು ಪಾಲಿಸಬೇಕೆಂದು ಪಿಎಸ್ಐ ಗೀತಾಂಜಲಿ ಶಿಂಧೆ ಹೇಳಿದರು.
ಸ್ಥಳೀಯ ಠಾಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಎರಡು ದಿನಗಳಲ್ಲಿ ಒಟ್ಟು ನಿಯಮ ಮೀರಿ ರಸ್ತೆಗಿಳಿದಿದ್ದ 50 ಬೈಕ್ ಗಳನ್ನು ಸೀಜ್ ಮಾಡಲಾಗಿದೆ ಎಂದು ಹೇಳಿದರು. ಪಟ್ಟಣದಲ್ಲಿ ಕರೊನಾ ಪಾಸಿಟಿವ್ ಪ್ರಕರಣಗಳು ಕಡಿಮೆ ಇರುವುದು ಸಮಾಧಾನಕರ ವಿಷಯವಾಗಿದೆ.
ಸಮೀಪದ ಮುದೇನೂರ ಭಾಗದ ಜನರು ಶ್ರೀ ಶೈಲಕ್ಕೆ ಹೋಗಿ ಬಂದಿದ್ದರಿಂದಾಗಿ ಕರೊನಾ ಪ್ರಕರಣಗಳು ಹೆಚ್ಚಾಗಿದ್ದು ಕಂಡುಬಂದಿದೆ. ಹಾಗೆ ಸಾರ್ವಜನಿಕರು ಕೂಡ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಕಿಲ್ಲರ್ ಕರೊನಾ ಹೋಗಲಾಡಿಸಲು ಸಹಕಾರ ನೀಡಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಎಸ್ಐ ಅತೀಕ್ ಅಹಮ್ಮದ್, ಸಿಬ್ಬಂದಿ ಗಳಾದ ಬಸವರಾಜ ಇಂಗಳದಾಳ, ಶರಣಬಸವ, ಗೀತಾ, ಪ್ರೇಮಾ, ಕರಿಯಪ್ಪ ಸೇರಿದಂತೆ ಇನ್ನಿತರ ಸಿಬ್ಬಂದಿ ವರ್ಗದವರಿದ್ದರು.