ಪ್ರೀತಿಯ ಓದುಗರೇ,ಕೋವಿಡ್ ನಿರ್ಣಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
——————————————–
ವರದಿ ಎನ್ ಶಾಮೀದ್ ತಾವರಗೇರಾ
ತಾವರಗೇರಾ: ರೋಗ ಬರದಂತೆ ನೋಡಿಕೊಳ್ಳುವುದು ಅತೀ ಮುಖ್ಯವಾಗಿದ್ದು ಕರೊನಾ ಮಹಾಮಾರಿಯು ದೇಶಾದ್ಯಂತ ವ್ಯಾಪಕವಾಗಿ ಹರಡುತ್ತಿದ್ದು ಸಾರ್ವಜನಿಕರು ಎಚ್ಚೆತ್ತುಕೊಂಡು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ರೋಗವನ್ನು ಹೋಗಲಾಡಿಸಬೇಕೆಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಹೇಳಿದರು.
ಪಟ್ಟಣದಲ್ಲಿ ಬೆಳಿಗ್ಗೆಯೇ ಬಂದು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜನರಲ್ಲಿ ಕರೊನಾ ಜಾಗೃತಿಯಿಂದಿರಲು ಕರೆ ನೀಡಿದರು.
ನಂತರ ಮಾತನಾಡಿ ಬೆಳಿಗ್ಗೆ ಯೇ ಪೊಲೀಸ್ ರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಮುಖ ಸ್ಥಳಗಳಲ್ಲಿ ನಿಯೋಜನೆ ಗೊಂಡು ಸಾರ್ವಜನಿಕರಿಗೆ ಎಚ್ಚರಿಕೆ ನೀಡಬೇಕಾಗಿದೆ. ಊರಿನ ಪ್ರಮುಖ ರಸ್ತೆಗಳಲ್ಲಿ ನಾಕಾ ಬಂದಿ ಹಾಕುವ ಮೂಲಕ ಜನರು ಬೇಕಾ ಬಿಟ್ಟಿ ಓಡಾಡುವದನ್ನು ತಡೆಯಬೇಕು. ಸಾರ್ವಜನಿಕರು ಮನೆಯಲ್ಲಿದ್ದುಕೊಂಡು ತಮ್ಮ ಸುರಕ್ಷತೆ ಕಾಪಾಡಿಕೊಳ್ಳಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಅಧ್ಯಕ್ಷ ವಿಕ್ರಮ್ ರಾಯ್ಕರ್, ಮುಖಂಡರಾದ ನಾರಾಯಣಗೌಡ ಮೆದಿಕೇರಿ, ಅಮರೇಶ ಗಾಂಜಿ, ರುದ್ರಗೌಡ ಕುಲಕರ್ಣಿ, ಅಮರೇಶ ಕುಂಬಾರ, ಶುಕುರ್ ಬನ್ನು, ರಾಮಸಿಂಗ್, ಮೆಹೆಬೂಬ ಬಿಸ್ತಿ ಮತ್ತಿತರರಿದ್ದರು.