ಪ್ರೀತಿಯ ಓದುಗ ದೊರೆಗಳೇ,ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………..
ವರದಿ ಎನ್ ಶಾಮೀದ್ ತಾವರಗೇರಾ
ತಾವರಗೇರಾ: ಕರೊನಾ ನಿಯಂತ್ರಿಸುವಲ್ಲಿ ಫ್ರಂಟ್ ಲೈನ್ ವಾರಿಯಸ್೯ ಎಂದು ಸರ್ಕಾರ ಗುರುತಿಸಿರುವ ಪೊಲೀಸ್ ಇಲಾಖೆ, ಆಶಾ ಕಾರ್ಯಕರ್ತೆ ಯರು, ಶಿಕ್ಷಕರು, ಪೌರ ಕಾರ್ಮಿಕರು ಹಾಗೂ ಪತ್ರಕರ್ತರಿಗೆ ಸರ್ಕಾರದಿಂದ ಯಾವುದೇ ಸೌಲಭ್ಯಗಳನ್ನು ನೀಡದಿರುವುದು ವಿಷಾದನಿಯ ಸಂಗತಿಯಾಗಿದೆ.
ಜನರ ಪ್ರಾಣ ರಕ್ಷಣೆಗಾಗಿ ತಮ್ಮ ಕುಟುಂಬ ವನ್ನು ಲೆಕ್ಕಿಸದೆ ಪ್ರಾಮಾಣಿಕ ವಾಗಿ ಸೇವೆ ಸಲ್ಲಿಸುತ್ತಿರುವ ಮತ್ತು ದಿನನಿತ್ಯ ಸಾರ್ವಜನಿಕರ ಮಧ್ಯೆ ಕೆಲಸ ಮಾಡುತ್ತಿರುವ ಇವರಿಗೆ ಕನಿಷ್ಠ ಪಕ್ಷ ಆರೋಗ್ಯದ ಹಿತದೃಷ್ಟಿಯಿಂದಾದರು ಅವರಿಗೆ ಆರೋಗ್ಯದ ಕಿಟ್ ಗಳು ಮತ್ತು ಪಡಿತರ ಕಿಟ್ ಗಳನ್ನಾದರು ನೀಡಲು ಸರ್ಕಾರ ಮುಂದಾಗಬೇಕಾಗಿದೆ.
ಕಳೆದ ಬಾರಿ ಲಾಕ್ ಡೌನ್ ಸಂಧರ್ಬದಲ್ಲಿ ಜನ ಪ್ರತಿನಿಧಿಗಳು ಹಾಗೂ ಸಾರ್ವಜನಿಕ ಸಂಘ ಸಂಸ್ಥೆಗಳು ತಮ್ಮ ಕೈಲಾದ ಮಟ್ಟಿಗೆ ಸಹಾಯ ಹಸ್ತ ಚಾಚಿದನ್ನು ಇಲ್ಲಿ ಸ್ಮರಿಸಬಹುದಾಗಿದೆ, ಆದರೆ ಈ ಬಾರಿ ಯಾರೊಬ್ಬರು ಕರೊನಾ ವಾರಿಯಸ್೯ ಬಗ್ಗೆ ಸ್ವಲ್ಪವೂ ಕಾಳಜಿ ತೋರಿಸದಿರುವುದು ಆಶ್ಚರ್ಯಕರವಾಗಿದೆ. ಸಾರ್ವಜನಿಕರ ಸೇವೆಯನ್ನೇ ತೊಡಗಿಸಿಕೊಂಡಿರುವ ಸಮಾಜಮುಖಿ ಆಗಿರುವ ಕರೊನಾ ವಾರಿಯಸ್೯ ಗಳಿಗೆ ಸರ್ಕಾರ ಹಾಗೂ ಸಾರ್ವಜನಿಕರು ನೆರವಾಗಬೇಕೆಂಬುದು ಪ್ರಜ್ಞಾವಂತರ ಅಭಿಪ್ರಾಯ ವಾಗಿದೆ.