ಪ್ರೀತಿಯ ಓದುಗ ದೊರೆಗಳೇ,ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………..
ವರದಿ ಎನ್ ಶಾಮೀದ್ ತಾವರಗೇರಾ
ತಾವರಗೇರಾ: ಕರೊನಾದಿಂದ ಮೃತ ಪಟ್ಟ ಕಿಲಾರಹಟ್ಟಿ ಸರಕಾರಿ ಪ್ರೌಢಶಾಲೆಯ ಮುಖ್ಯ ಗುರು ಯಂಕಪ್ಪ ಸುಭೇದಾರ ಅವರ ಸ್ವ ಗ್ರಾಮವಾದ ಹಿರೇಮನ್ನಾಪೂರ ಗ್ರಾಮದಲ್ಲಿರುವ ಅವರ ಮನಗೆ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಭೇಟಿ ನೀಡಿ ಸಾಂತ್ವನ ಹೇಳಿದರು.
ನಂತರ ಕುಟುಂಬ ಸದಸ್ಯರೊಂದಿಗೆ ಹಾಗೂ ಗ್ರಾಮಸ್ಥರೊಂದಿಗೆ ಮಾತನಾಡಿ ಕರೊನಾ ಮಹಾಮಾರಿಯು ಅತ್ಯಂತ ಭೀಕರತೆ ಯಿಂದ ಕೂಡಿದ್ದು ಜನರು ಜಾಗೃತರಾಗಬೇಕು ಮತ್ತು ಕೊವೀಡ್ ನಿಯಮಗಳನ್ನು ಪಾಲಿಸಿ ತಮ್ಮ ಜೀವ ರಕ್ಷಣೆ ಮಾಡಿಕೊಳ್ಳಬೇಕಾದ ಅವಶ್ಯಕತೆ ಇದೆ. ನಗರ ಪ್ರದೇಶಗಳಲ್ಲಿ ವೈದ್ಯಾಧಿಕಾರಿಗಳು ಹೆಚ್ಚಿರುವುದರಿಂದಾಗಿ ಸ್ವಲ್ಪ ಮಟ್ಟಿನ ರೋಗ ಪ್ರಮಾಣ ಹತೋಟಿಯಲ್ಲಿರಲು ಸಾಧ್ಯವಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ವೈದ್ಯಕೀಯ ಸಿಬ್ಬಂದಿಗಳ ಕೊರತೆ ಕಾಣುತ್ತಿದೆ, ಈ ನಿಟ್ಟಿನಲ್ಲಿ ಸಾರ್ವಜನಿಕರು ಎಚ್ಚೆತ್ತುಕೊಂಡು ಕೊವೀಡ್ ನಿಯಮಗಳನ್ನು ಪಾಲಿಸಿ ಕರೊನಾ ನಿಯಂತ್ರಿಸಬೇಕೆಂದು ಹೇಳಿದರು.
ತಾಲೂಕಿನ ಜನತೆ ಆದಷ್ಟು ತಮ್ಮ ಜಾಗೃತೆಯಲ್ಲಿರಬೇಕೆಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಕುಟುಂಬದ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.