ಪ್ರೀತಿಯ ಓದುಗ ದೊರೆಗಳೇ,ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………..
ವರದಿ ಎನ್ ಶಾಮೀದ್ ತಾವರಗೇರಾ
ಕೊಪ್ಪಳ: ಕರೊನಾ ಸೊಂಕು ನಿಯಂತ್ರಣಕ್ಕಾಗಿ ಜಿಲ್ಲೆಯಾದ್ಯಂತ ಮತ್ತೊಮ್ಮೆ ನಾಳೆ ( 31-05-2021) ಯಿಂದ ಜೂನ 7 ರ ವರೆಗೆ ಸಂಪೂರ್ಣ ಲಾಕ್ ಡೌನ ಘೋಷಿಸಿರುವ ಜಿಲ್ಲಾಡಳಿತದ ಕ್ರಮಕ್ಕೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಮೇ 23 ರಿಂದ 30 ರವರೆಗೆ ಸಂಪೂರ್ಣ ಲಾಕ್ ಡೌನ ಘೋಷಿಸಿದ್ದ ಜಿಲ್ಲಾಡಳಿತ ಈಗ ಒಂದು ದಿನ ಕೂಡ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡದಿರುವುದು ಜಿಲ್ಲೆಯ ಜನರಲ್ಲಿ ತೀವ್ರ ಅಸಮಾಧಾನ ಕ್ಕೆ ಕಾರಣವಾಗಿದೆ.
ಈ ಕುರಿತಂತೆ ಜಿಲ್ಲಾಡಳಿತ ವು ಮರು ಪರಿಶೀಲಿಸಿ, ವಾರಕ್ಕೆ ಎರಡು ದಿನವಾದರು ಕೆಲವು ಗಂಟೆಗಳ ಕಾಲ ಕಿರಾಣಿ ಹಾಗೂ ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಿಕೊಟ್ಟು ಸಾರ್ವಜನಿಕರ ನಿತ್ಯದ ಜನ ಜೀವನಕ್ಕೆ ಅವಕಾಶ ಕಲ್ಪಿಸಿಕೊಡಬೇಕಾಗಿದ್ದು ಈ ಹಿನ್ನಲೆಯಲ್ಲಿ ಜನ ಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತ ಕ್ರಮ ಕೈಗೊಂಡು ಅವಕಾಶ ಕಲ್ಪಿಸಿಕೊಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ರಾಜ್ಯದ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಕೂಡ ವಾರದಲ್ಲಿ 2 ದಿನ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಿದ್ಸು, ಕೊಪ್ಪಳ ಜಿಲ್ಲೆಯಲ್ಲಿ ಮಾತ್ರ ಮುಂದುವರೆದು 1 ವಾರ ಅಂದರೆ ಹಿಂದಿನ ಲಾಕ್ ಡೌನ ಸೇರಿದಂತೆ 15 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ ಘೋಷೊಸಿರಿವುದು ಜಿಲ್ಲೆಯ ಜನರ ಜೀವನ ಅಸ್ತವ್ಯಸ್ತಕ್ಕೆ ಕಾರಣವಾಗಿದೆ.