Thursday , September 19 2024
Breaking News
Home / Breaking News / ತಾವರಗೇರಾ: ಜೂಜಾಟದಲ್ಲಿ ತೊಡಗಿದ್ದ 5 ಜನ ಅಂಧರ್, 5 ಜನ ಬಾಹರ್..!

ತಾವರಗೇರಾ: ಜೂಜಾಟದಲ್ಲಿ ತೊಡಗಿದ್ದ 5 ಜನ ಅಂಧರ್, 5 ಜನ ಬಾಹರ್..!

ಪ್ರೀತಿಯ ಓದುಗ ದೊರೆಗಳೇ,ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.

………………………………………………..

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇಸ್ಪಿಟ್ ಜೂಜಾಟದಲ್ಲಿ ತೊಡಗಿದ್ದ 10 ಜನರಲ್ಲಿ 5 ಜನರನ್ನು ಬಂಧಿಸಲಾಗಿದ್ದು, ಇನ್ನುಳಿದ 5 ಜನರು ಪರಾರಿಯಾದ ಘಟನೆ ಸಮೀಪದ ಮೆಣೇಧಾಳ ಗ್ರಾಮದಲ್ಲಿ ನಡೆದಿದೆ.

ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಇಲ್ಲಿಯ ಠಾಣಾಧಿಕಾರಿ ಗೀತಾಂಜಲಿ ಶಿಂಧೆ ಹಾಗೂ ಸಿಬ್ಬಂದಿ ವರ್ಗದವರು ಮೆಣೇಧಾಳ ಸೀಮಾ ವ್ಯಾಪ್ತಿಯ ಸರ್ಕಾರಿ ಜಾಗದಲ್ಲಿ ಗುಂಪು ಗುಡಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದವರಲ್ಲಿ 5 ಜನರನ್ನು ಬಂಧಿಸಲಾಗಿದ್ದು ಉಳಿದ ಇನ್ನಿತರರು ಪರಾರಿಯಾಗಿದ್ದು ಬಂಧಿತರಿಂದ 7220 ರೂಪಾಯಿ ಹಾಗೂ 52 ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಂಡಿದ್ದು ಇತರ ಆರೋಪಿಗಳ ವಿರುದ್ದ ತನಿಖೆ ಮುಂದುವರೆದಿದೆ, ಈ ಕುರಿತು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

One comment

  1. ಅವರು ಹೆಸರು ಇಲ್ಲ ರೀ

error: Content is protected !!