Thursday , September 19 2024
Breaking News
Home / Breaking News / ತಾವರಗೇರಾ: ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ..!

ತಾವರಗೇರಾ: ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ..!

ಪ್ರೀತಿಯ ಓದುಗ ದೊರೆಗಳೇ,ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.

………………………………………………..

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಪಟ್ಟಣದ ಆಪ್ತಮಿತ್ರ ಗೆಳೆಯರ ಬಳಗ ತಂಡದ ವತಿಯಿಂದ ಪಟ್ಟಣದಲ್ಲಿಯ ನಿರ್ಗತಿಕ ಬಡವರನ್ನು ಗುರುತಿಸಿ ಆಹಾರದ ಕಿಟ್ ಗಳನ್ನು ವಿತರಿಸಲಾಯಿತು. ಪಟ್ಟಣದ ವಿವಿಧ ವಾರ್ಡಗಳಿಗೆ ತೆರಳಿ ಆಹಾರದ ಕಿಟ್ ಗಳನ್ನು ವಿತರಿಸಿದರು. ಈ ಕಾರ್ಯಕ್ರಮಕ್ಕೆ ಪಟ್ಟಣ ಪಂಚಾಯತ ಅಧ್ಯಕ್ಷ ಹಾಗೂ ಎಎಸ್ಐ ಬಸವರಾಜ ನಾಯಕವಾಡಿ ಚಾಲನೆ ನೀಡಿದರು. ಅಧ್ಯಕ್ಷ ವಿಕ್ರಮ್ ರಾಯ್ಕರ್ ಮಾತನಾಡಿ ಕರೊನಾ ಸಂಧರ್ಬದಲ್ಲಿ ಬಡ ಕುಟುಂಬಗಳಿಗೆ ಆಹಾರದ ಕಿಟ್ ಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ ವಾಗಿದ್ದು ಇನ್ನಿತರ ಸಂಘಸಂಸ್ಥೆಗಳು ಕೂಡ ಇಂತಹ ಕಾರ್ಯಕ್ಕೆ ಮುಂದೆ ಬರಬೇಕೆಂದು ಹೇಳಿದರು.

ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಆಹಾರ ಕಿಟ್ ಗಳ ವಿತರಣೆ:

ಪಟ್ಟಣದ ವಿವಿಧ ವಾರ್ಡನ ಬಡವರಿಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆಗು ತೆರಳಿ ಕುಟುಂಬ ಗಳಿಗೆ ಆಹಾರದ ಕಿಟ್ ಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡರಾದ ಅಮರೇಶ ಕುಂಬಾರ, ಫಯಾಜ್ ಬನ್ನು, ಶುಕುರ ಬನ್ನು, ಹಾಗೂ ಇನ್ನಿತರ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!