ಪ್ರೀತಿಯ ಓದುಗ ದೊರೆಗಳೇ,
ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………..
ವರದಿ ಎನ್ ಶಾಮೀದ್ ತಾವರಗೇರಾ
ತಾವರಗೇರಾ: ಕರೊನಾ ಸಂಕಷ್ಟಕ್ಕೆ ಒಳಗಾಗಿರುವ ರಾಜ್ಯದ ಜನರಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ನಾಲ್ಕು ಕೋಟಿ ರೂಪಾಯಿಗಳ ನೆರವು ನೀಡಿದ್ದಾರೆಂದು, ಸಂಸ್ಥೆಯ ಕಲ್ಯಾಣ ಕರ್ನಾಟಕ ಪ್ರಾದೇಶಿಕ ನಿರ್ದೇಶಕರಾದ ಪುರುಷೋತ್ತಮ ಪಿ ಕೆ ಅವರು ಹೇಳಿದರು.
ಪಟ್ಟಣದ ಶ್ರೀ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಕಡು ಬಡವರಿಗೆ ಸಂಸ್ಥೆಯ ವತಿಯಿಂದ ನೀಡಲಾದ ಆಹಾರ ಕಿಟ್ಟುಗಳನ್ನು ವಿತರಿಸಿ ಮಾತನಾಡಿದರು. ರಾಜ್ಯದ ವಿವಿಧ ಜಿಲ್ಲೆಗಳಿಗೆ ಆಕ್ಸಿಜನ್, ವೆಂಟಿಲೇಟರ್ ಮತ್ತು 10 ಸಾವಿರ ಆಹಾರ ಕಿಟ್ ಗಳನ್ನು ವಿವರಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಪಪಂ ಅಧ್ಯಕ್ಷ ವಿಕ್ರಮ್ ರಾಯ್ಕರ್, ಸ್ಥಳೀಯ ಠಾಣೆಯ ಮುಖ್ಯ ಪೇದೆ ಶಂಕರ್ ಹೆಬ್ಬಲಿ, ಗುರುಮೂರ್ತಿ ಸ್ವಾಮಿ, ರುದ್ರಪ್ಪ ಅಕ್ಕಿ, ಸೋಮಮ್ಮ ಕುಂಬಾರ, ಸಾಧಿಕಾ ಬೇಗಂ ಇನ್ನಿತರರಿದ್ದರು.
ತಾಲೂಕ ಯೋಜನಾಧಿಕಾರಿ ಶೇಖರ ನಾಯಕ ನಿರೂಪಿಸಿದರು, ಸ್ಥಳೀಯ ವಲಯ ಮೆಲ್ವಿಚಾರಕ ಹುಸೇನ ವಂದಿಸಿದರು.
ಒಟ್ಟು 50 ಜನರಿಗೆ ಆಹಾರದ ಕಿಟ್ ಗಳನ್ನು ವಿತರಿಸಲಾಯಿತು.