ಪ್ರೀತಿಯ ಓದುಗ ದೊರೆಗಳೇ,ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………..
ವರದಿ ಎನ್ ಶಾಮೀದ್ ತಾವರಗೇರಾ
ತಾವರಗೇರಾ: ಲಾಕ್ ಡೌನ್ ಹಿನ್ನಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಯ ಅವಧಿ ಮುಗಿದ ನಂತರ ಅಡ್ಡಾದಿಡ್ಡಿ ಓಡಾಡುವ ವಾಹನಗಳನ್ನು ತಡೆದು ಪೊಲೀಸ್ ರು ದಂಡ ವಿಧಿಸುತ್ತಿರುವುದು ಕಂಡುಬಂತು.
ಈ ಕುರಿತು ಠಾಣಾಧಿಕಾರಿ ಗೀತಾಂಜಲಿ ಶಿಂಧೆ ಮಾತನಾಡಿ ಸಾರ್ವಜನಿಕರಿಗೆ ಕರೊನಾ ನಿಯಮಗಳನ್ನು ಪಾಲಿಸುವಂತೆ ಎಷ್ಟೇ ಮನವಿ ಮಾಡಿಕೊಂಡರು ಕೂಡ ಸುಳ್ಳು ನೆಪ ಹೇಳಿ ತಿರುಗಾಡುತ್ತಿದ್ದಾರೆ.
ಜೊತೆಗೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಬೈಕ್ ಸವಾರರು ಹಾಗೂ ಇತರ ವಾಹನಗಳ ಚಾಲಕರಿಗೆ ಎಚ್ಚರಿಕೆ ನೀಡಲಾಗುತ್ತಿದ್ದು, ನಿಯಮಗಳನ್ನು ಪಾಲಿಸದಿರುವವರ ವಿರುದ್ದ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಆದ್ದರಿಂದ ಸಾರ್ವಜನಿಕರು ಆದಷ್ಟು ಸರಕಾರದ ನಿಯಮಗಳನ್ನು ಪಾಲಿಸಿ ಸಹಕಾರ ನೀಡಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಎಸ್ಐ ಗಳಾದ ಬಸವರಾಜ ನಾಯಕವಾಡಿ, ಮೆಹೆಬೂಬ ಸಾಬ, ಸಿಬ್ಬಂದಿಗಳಾದ ಕರಿಯಪ್ಪ, ಶರಣಬಸವ, ಹನುಮಂತ, ಯಮನೂರ, ಹಾಗೂ ಗೃಹರಕ್ಷಕ ದಳ ಸಿಬ್ಬಂದಿ ಇದ್ದರು.