ಪ್ರೀತಿಯ ಓದುಗ ದೊರೆಗಳೇ,
ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………..
ವರದಿ ಎನ್ ಶಾಮೀದ್ ತಾವರಗೇರಾ
ತಾವರಗೇರಾ: ಕರುನಾಡಿನ ಧೀಮಂತ ಸಾಹಿತಿ ಹಾಗೂ ಕವಿ ಡಾ.ಸಿದ್ದಲಿಂಗಯ್ಯ (67) ಕರೊನಾ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿರುವುದು ರಾಜ್ಯದ ಲಕ್ಷಾಂತರ ಜನ ಅಭಿಮಾನಿಗಳು ಸುದ್ದಿ ತಿಳಿಯುತ್ತಿದ್ದಂತೆ ಅಘಾತಗೊಂಡಿದ್ದಾರೆ.
ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಹುಟ್ಟು ಹೋರಾಟಗಾರರಾಗಿದ್ದ ಡಾ.ಸಿದ್ದಲಿಂಗಯ್ಯ ಅವರು ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರ ಜೊತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು.
ಅವರ ಆತ್ಮ ಕಥನವಾಗಿದ್ದ “ಊರು ಕೇರಿ” ಮೂಲಕ ನಾಡಿನಾದ್ಯಂತ ಪ್ರಸಿದ್ದಿ ಪಡೆದಿದ್ದರು, ದಲಿತ ಕವಿ ಯಂದೆ ಖ್ಯಾತರಾಗಿದ್ದ ಅವರು ಹಲವಾರು ರಂಗಗಳಲ್ಲಿ ಹೆಸರುವಾಸಿಯಾಗಿದ್ದ ಅವರನ್ನು ಕಳೆದುಕೊಂಡಿರುವುದು ನಾಡಿಗೆ ತುಂಬಲಾರದ ನಷ್ಟವಾಗಿದೆ.
ಅವರ ನಿಧನಕ್ಕೆ ರಾಜ್ಯದ ಮುಖ್ಯ ಮಂತ್ರಿಗಳು ಸೇರಿದಂತೆ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಡಾ. ಸಿದ್ದಲಿಂಗಯ್ಯ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ಸದಸ್ಯರಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲೆಂದು ಉದಯವಾಹಿನಿ ಯ ಆಶಯವಾಗಿದೆ.