ಪ್ರೀತಿಯ ಓದುಗ ದೊರೆಗಳೇ,ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………..
ವರದಿ ಎನ್ ಶಾಮೀದ್ ತಾವರಗೇರಾ
ತಾವರಗೇರಾ: ತೈಲ ಬೆಲೆ ಏರಿಕೆ ವಿರೋಧಿಸಿ ರಾಜ್ಯದಾದ್ಯಂತ ಕಾಂಗ್ರೆಸ್ ಪಕ್ಷದಿಂದ ನಡೆಯುತ್ತಿರುವ ಪ್ರತಿಭಟನೆ ಹಿನ್ನಲೆಯಲ್ಲಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಅವರು ಪಟ್ಟಣದ ಪಂಪಾ ಪೆಟ್ರೋಲಿಯಂ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಲು ಬಂದ ಬೈಕ ಸವಾರರಿಗೆ ತಾವೇ 100 ರೂ ನೀಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.
ನಂತರ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರವು ಆಡಳಿತ ನಡೆಸುವಲ್ಲಿ ವಿಫಲವಾಗಿದ್ದು, ಸಾರ್ವಜನಿಕರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಬಡ ಹಾಗೂ ಮದ್ಯಮ ವರ್ಗದವರಿಗೆ ಅನ್ಯಾಯ ಮಾಡಿದೆ, ಇಂತಹ ಸರ್ಕಾರದ ವಿರುದ್ಧ ಸಾರ್ವಜನಿಕರು ಎಚ್ಚೆತ್ತುಕೊಂಡು ಬರುವ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಉದ್ಯಮಿ ಬಸನಗೌಡ ಮಾಲಿಪಾಟೀಲ, ಪಪಂ ಅಧ್ಯಕ್ಷ ವಿಕ್ರಮ್ ರಾಯ್ಕರ್, ಪಪಂ ಉಪಾಧ್ಯಕ್ಷ ನಾರಾಯಣ ಗೌಡ ಮೆದಿಕೇರಿ, ಮಾಜಿ ಗ್ರಾಪಂ ಅಧ್ಯಕ್ಷ ವೀರಭದ್ರಪ್ಪ ನಾಲತವಾಡ, ತಾವರಗೇರಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರುದ್ರಗೌಡ ಕುಲಕರ್ಣಿ, ಡಾ.ಶಾಮೀದ್ ದೋಟಿಹಾಳ, ದುರುಗೇಶ ನಾರಿನಾಳ, ಲಿಂಗರಾಜ ಹಂಚಿನಾಳ, ಅಮರೇಶ ಗಾಂಜಿ, ಅಮರೇಶ ಕುಂಬಾರ, ಸಂತೋಷ ಬಿಳೇಗುಡ್ಡ, ಶಾಮೀದ್ ನಾಡಗೌಡ, ಶಾಮಣ್ಣ ಹುನಗುಂದ, ರಾಮಣ್ಣ ಭೋವಿ, ಮಂಜು ಕುಂಬಾರ, ಕಲೀಂ ಮುಜಾವರ ಸೇರಿದಂತೆ ಇನ್ನಿತರ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.