Friday , November 22 2024
Breaking News
Home / Breaking News / ತಾವರಗೇರಾ: ಕ್ರಿಮಿನಾಶಕ ಸೇವಿಸಿ ಮಹಿಳೆ ಆತ್ಮಹತ್ಯೆ..!

ತಾವರಗೇರಾ: ಕ್ರಿಮಿನಾಶಕ ಸೇವಿಸಿ ಮಹಿಳೆ ಆತ್ಮಹತ್ಯೆ..!

ಪ್ರೀತಿಯ ಓದುಗ ದೊರೆಗಳೇ,
ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.

………………………………………………..

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಹೊಟ್ಟೆ ನೋವು ತಾಳಲಾರದೆ ಮನೆಯಲ್ಲಿದ್ದ ಕ್ರಿಮಿನಾಶಕ ಸೇವಿಸಿ ಮಹಿಳೆ ಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ಜೂಲಕುಂಟಿ ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಮೋನಮ್ಮ ಲಕ್ಷ್ಮಣ ಅಂಟರದಿನ್ನಿ (28) ಎಂದು ಗುರುತಿಸಲಾಗಿದ್ದು ಮೃತಳಿಗೆ ಇಬ್ಬರು ಮಕ್ಕಳಿದ್ದಾರೆ.

ಮೃತ ಮೋನಮ್ಮಳು ಕಳೆದ ಕೆಲ ವರ್ಷಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆದಿದ್ದರು ಕೂಡ ಗುಣಮುಖಳಾಗದ ಹಿನ್ನಲೆಯಲ್ಲಿ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕ್ರಿಮಿನಾಶಕ ಸೇವಿಸಿದ್ದಾಳೆ, ನಂತರ ಮೋನಮ್ಮಳನ್ನು ಕುಷ್ಟಗಿಯ ಸರಕಾರಿ ಆಸ್ಪತ್ರೆಗೆ ದಾಖಲಿಸುವ ಮಾರ್ಗಮಧ್ಯದಲ್ಲಿ ಮೃತ ಪಟ್ಟಿದ್ದಾಳೆ. ತಾಯಿ ದುರುಗಮ್ಮ ವಾಲ್ಮೀಕಿ ಸಾ.ಗದ್ದಡಕಿ ನೀಡಿದ ದೂರಿನ ಅನ್ವಯ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About N Shameed

Check Also

ತಾವರಗೇರಾ:- ರಸ್ತೆ ಅಪಘಾತ ಸ್ಥಳದಲ್ಲೇ ಇಬ್ಬರು ಸಾವು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ಗರ್ಜಿನಾಳ ಕ್ರಾಸ್ ಹತ್ತಿರ ದ್ವಿಚಕ್ರ ವಾಹನಕ್ಕೆ ಕೆಎಸ್ಆರ್ ಟಿ ಸಿ ಬಸ್ …

error: Content is protected !!