ಪ್ರೀತಿಯ ಓದುಗ ದೊರೆಗಳೇ,
ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………..
ವರದಿ : ನಾಗರಾಜ್ ಎಸ್ ಮಡಿವಾಳರ್
ಲಿಂಗಸಗೂರು : ತಾಲೂಕಿನಲ್ಲಿ ಕಾರಹುಣ್ಣಿಮೆ ಆಚರಣೆ ನಿಷೇದಪಡಿಸಿ ಲಿಂಗಸಗೂರು ತಹಸೀಲ್ದಾರ ಚಾಮರಾಜ ಪಾಟೀಲ್ ತಿಳಿಸಿದ್ದಾರೆ.
ತಾಲೂಕಿನ ವಿವಿಡಿದೆ ಇಂದು ಮತ್ತು ನಾಳೆ ಕಾರಹುಣ್ಣಿಮೆ ಆಚರಣೆ ಇರುವುದರಿಂದ ಯಾವುದೇ ರೀತಿಯಲ್ಲಿ ಜನರು ಗುಂಪು ಸೇರಿ ಆಚರಿಸಲು ಅವಕಾಶವಿರುವುದಿಲ್ಲ. ಹಬ್ಬಗಳನ್ನು ಬಹಿರಂಗವಾಗಿ ಗುಂಪುಗೂಡಿ ಆಚರಿಸುವುದನ್ನು ವಿಪತ್ತು ನಿರ್ವಹಣ ಕಾಯ್ದೆಯಡಿಯಲ್ಲಿ ನಿಷೇಧಿಸಲಾಗಿದ್ದು, ಸಾರ್ವಜನಿಕರು ಕರೋನ ವಿರುದ್ಧದ ಹೋರಾಟದಲ್ಲಿ ಸಹಕಾರ ನೀಡಬೇಕು,ಸರಕಾರದ ಕರೋನ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.