ಪ್ರೀತಿಯ ಓದುಗ ದೊರೆಗಳೇ,
ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………..
ವರದಿ ಎನ್ ಶಾಮೀದ್ ತಾವರಗೇರಾ
ತಾವರಗೇರಾ: ಸಮೀಪದ ಹೊನಗಡ್ಡಿ ಗ್ರಾಮದ ಜಮೀನುಗಳಲ್ಲಿ ಜೋಡಿ ಕರಡಿಗಳು ಪತ್ತೆಯಾಗಿವೆ, ಕಳೆದ ಕೆಲ ದಿನಗಳಿಂದ ಹೊನಗಡ್ಡಿಯ ಸುತ್ತಮುತ್ತಲಿನ ಜಮೀನುಗಳಲ್ಲಿ ಬೆಳೆದಿರುವ ಸೀಡ್ಸ್ ಕಲ್ಲಂಗಡಿ ಹಣ್ಣುಗಳನ್ನು ತಿನ್ನುವ ಮೂಲಕ ರೈತರ ಬೆಳೆ ನಾಶಕ್ಕೆ ಕಾರಣವಾಗಿರುವ ಜೋಡಿ ಕರಡಿಗಳು ಮತ್ತೊಮ್ಮೆ ಈಗ ರೈತನ ಜಮೀನುಗಳಿಗೆ ನುಗ್ಗಿ ಬೆಳೆ ನಾಶ ಮಾಡುತ್ತಿರುವುದು ಕಂಡು ಬಂದಿದೆ.
ಹೊನಗಡ್ಡಿ ಗ್ರಾಮದ ಹನಮಪ್ಪ ಮ್ಯಾದನೇರಿ ಇವರ ಜಮೀನಿನಲ್ಲಿ ಬೆಳೆದಿದ್ದ ಸೀಡ್ಸ್ ಕಲ್ಲಂಗಡಿ ಕರಡಿ ದಾಳಿಯಿಂದ ಹಾನಿಯಾದ ಸ್ಥಳಕ್ಕೆ ಶಾಸಕ ಅಮರೇಗೌಡ ಗೌಡ ಬಯ್ಯಾಪೂರ ಭೇಟಿ ನೀಡಿ ಪರಿಶೀಲಿಸಿ ಈ ಬಗ್ಗೆ ಅರಣ್ಯ ಇಲಾಖೆ ಗಮನಕ್ಕೆ ತರುವದಾಗಿ ತಿಳಿಸಿದರು.
ಈಗ ಸ್ಥಳೀಯರ ಮೊಬೈಲ್ ಕ್ಯಾಮೆರಾ ದಲ್ಲಿ ಜೋಡಿ ಕರಡಿಗಳು ಪ್ರತ್ಯಕ್ಷ ವಾಗಿದ್ದು ರೈತರ ಆತಂಕಕ್ಕೆ ಕಾರಣವಾಗಿದೆ. ಈ ಬಗ್ಗೆ ಅರಣ್ಯಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ರೈತರು ಒತ್ತಾಯಿಸಿದರು.