ವರದಿ ಎನ್ ಶಾಮೀದ್ ತಾವರಗೇರಾ
ಬೆಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸಮಸ್ಯೆಗಳು ಹಾಗೂ ಶಿಕ್ಷಕರ ನೇಮಕಾತಿಯ ಬಗ್ಗೆ ಸರ್ಕಾರದ ಗಮನ ಸೆಳೆದ ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ.
ಪ್ರಾಥಮಿಕ ಶಾಲೆ ಶಿಕ್ಷಕರ ಸಮಸ್ಯೆ ಹಾಗೂ ಶಿಕ್ಷಕರ ನೇಮಕಾತಿಯ ಬಗ್ಗೆ ಸರ್ಕಾರವು ತೋರುತ್ತಿರುವ ನಿರಾಸಕ್ತಿಯ ಬಗ್ಗೆ ಸರ್ಕಾರವನ್ನು ಎಚ್ಚರಿಸುವ ಮೂಲಕ ರಾಜ್ಯಾದ್ಯಂತ ಖಾಲಿ ಇರುವ 30 ಸಾವಿರ ಶಿಕ್ಷಕರ ಪೈಕಿ ಕಲ್ಯಾಣ ಕರ್ನಾಟಕ ಭಾಗದಲ್ಲಿಯೇ 15794 ಶಿಕ್ಷಕರ ಕೊರತೆ ಇದ್ದು 371 (ಜೆ) ಕಲಂ ವಿಶೇಷ ಸ್ಥಾನಮಾನ ನೀಡಿದ್ದರು ಕೂಡ ಇದುವರೆಗೂ ಕಾರ್ಯರೂಪಕ್ಕೆ ಬರದೇ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದ್ದು ತಕ್ಷಣವೇ ಮುಖ್ಯಮಂತ್ರಿಗಳು ಹಾಗೂ ಸಂಭಂದಿಸಿದ ಸಚಿವರು ಗಮನ ಹರಿಸಿ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಜೊತೆಗೆ ಕುಷ್ಟಗಿ ಕ್ಷೇತ್ರದಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಬೇಕು.
ಸ್ವತಃ ನನ್ನ ಕ್ಷೇತ್ರದಲ್ಲಿ 762 ಶಿಕ್ಷಕರ ಕೊರತೆ ಇದೆ, ತಕ್ಷಣವೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು, ಕಲ್ಯಾಣ ಕರ್ನಾಟಕದ ಸಮಸ್ಯೆ ಗಳನ್ನು ಶೀಘ್ರವೇ ಪರಿಹರಿಸಬೇಕು ಎಂದು ಒತ್ತಾಯಿಸಿದರು.