ವರದಿ ಎನ್ ಶಾಮೀದ್ ತಾವರಗೇರಾ
ಹುಬ್ಬಳ್ಳಿ: ಗಾಂಜಾ ಮಾರಾಟ ಮಾಡುವ ಖದೀಮರನ್ನು ಹಿಡಿಯಬೇಕಾದ ಪೊಲೀಸರೆ ಗಾಂಜಾ ಮಾರಾಟ ಮಾಡಿದ ಘಟನೆ ರಾಜ್ಯದಲ್ಲಿ ಬೆಚ್ಚಿಬೀಳಿಸುವಂತಾಗಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ನವನಗರ ಠಾಣೆಯ ಇನ್ಸ್ಪೆಕ್ಟರ್ ಸೇರಿ 7 ಜನ ಸಿಬ್ಬಂದಿ ಯನ್ನು ಅಮಾನತು ಮಾಡಲಾಗಿದೆ ಎಂದು ಹುಬ್ಬಳ್ಳಿ – ಧಾರವಾಡ ಪೋಲಿಸ್ ಆಯುಕ್ತರಾದ ಲಾಭೂರಾಮ್ ಆದೇಶ ಹೊರಡಿಸಿದ್ದಾರೆ.
ಕಳೆದ ವಾರ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಮಾರಾಟಗಾರರನ್ನು ಬಂಧಿಸಿ ಪ್ರಕರಣವನ್ನು ದಾಖಲಿಸಿಕೊಳ್ಳದೇ ಆರೋಪಿಗಳನ್ನು ಬಿಟ್ಟು ಕಳುಹಿಸಿದ್ದರು, ಅವರಲ್ಲಿದ್ದ 1 ಕೆಜಿ ಗಾಂಜಾವನ್ನು ಪೊಲೀಸ್ ರೆ ಮಾರಾಟ ಮಾಡಿದ್ದಾರೆ ಎಂ ಗಂಭೀರ ಆರೋಪ ಕೇಳಿ ಬಂದಿತ್ತು, ಈ ಹಿನ್ನೆಲೆಯಲ್ಲಿ ಡಿಸಿಪಿ ನೇತೃತ್ವದ ತಂಡ ರಚಿಸಿ ತನಿಖೆ ಕೈಗೊಳ್ಳಲಾಗಿತ್ತು ಕೊನೆಗೆ ನವನಗರ ಠಾಣೆಯ ಇನ್ಸ್ಪೆಕ್ಟರ್ ವಿಶ್ವನಾಥ ಚೌಗಲೆ, ಎಎಸ್ಐ ವಿಕ್ರಮ ಪಾಟೀಲ್ ಸೇರಿದಂತೆ 7 ಜನರನ್ನು ಅಮಾನತು ಮಾಡಲಾಗಿದೆ