Friday , September 20 2024
Breaking News
Home / Breaking News / ಕುಷ್ಟಗಿ: ಸಿದ್ದರಾಮಯ್ಯನವರು ಹಗುರವಾಗಿ ಮಾತನಾಡಬಾರದು,–ಬಿ ಎಸ್ ಯಡಿಯೂರಪ್ಪ..!

ಕುಷ್ಟಗಿ: ಸಿದ್ದರಾಮಯ್ಯನವರು ಹಗುರವಾಗಿ ಮಾತನಾಡಬಾರದು,–ಬಿ ಎಸ್ ಯಡಿಯೂರಪ್ಪ..!

ವರದಿ ಎನ್ ಶಾಮೀದ್ ತಾವರಗೇರಾ

ಕುಷ್ಟಗಿ: ಮಾಜಿ ಸಿಎಂ ಸಿದ್ದರಾಮಯ್ಯ ಬೇಜವಾಬ್ದಾರಿತನದ ಹೇಳಿಕೆ ನೀಡುತ್ತಿರುವುದು ಅವರಿಗೆ ಶೋಭೆ ತರುವಂತದಲ್ಲ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು.
ಅವರು ಪಟ್ಟಣದ ಸರ್ಕೂಟ್ ಹೌಸ್ ನಲ್ಲಿ ಪಕ್ಷದ ಮುಖಂಡರಿಂದ ಸನ್ಮಾನ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿಂಧಗಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ತಿಳಿಸಿದ ಅವರು, ಬೊಮ್ಮಾಯಿ ನೇತೃತ್ವದ ಸರ್ಕಾರವು ಒಳ್ಳೆಯ ಕೆಲಸ ಮಾಡುತ್ತಿದೆ ಎಂಬುದು ಸಾರ್ವಜನಿಕರಿಂದಲೇ ತಿಳಿದುಬರುತ್ತಿದೆ, ಅದೇ ರೀತಿ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಿ ಅಭಿವೃದ್ಧಿ ಕಡೆ ಉತ್ತಮ ಹೆಜ್ಜೆ ಇಟ್ಟಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಹಾಗೂ ಬಿಜೆಪಿ ಜಿಲ್ಲಾಅಧ್ಯಕ್ಷ ದೊಡ್ಡನಗೌಡ ಪಾಟೀಲ್, ಮಾಜಿ ಶಾಸಕ ಕೆ ಶರಣಪ್ಪ, ಬಿಜೆಪಿ ತಾಲೂಕ ಅಧ್ಯಕ್ಷ ಬಸವರಾಜ ಹಳ್ಳುರ, ಯುವ ಮೋರ್ಚ ಅಧ್ಯಕ್ಷ ಉಮೇಶ ಯಾದವ, ಮುಖಂಡರಾದ ಮಲ್ಲಣ್ಣ ಪಲ್ಲೆದ, ಚಂದ್ರಕಾಂತ ಒಡಗೇರಿ, ಶಂಕರಗೌಡ ಪಾಟೀಲ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

 

 

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!