ವರದಿ ಎನ್ ಶಾಮೀದ್ ತಾವರಗೇರಾ
ಕಲಬುರಗಿ: ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ತಾಯಿಯೊಬ್ಬಳು ತನ್ನ ಹೆತ್ತ ಕಂದಮ್ಮಗಳಿಗೆ ಬೆಂಕಿ ಹಚ್ಚಿ ತಾನು ಕೂಡ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಪಂಚಶೀಲ ನಗರದಲ್ಲಿ ನಡೆದಿದೆ.
ದೀಕ್ಷಾ(26) ವರ್ಷ ಮಗಳು ಸಿಂಚನ (2), ಸಾವನ್ನಪ್ಪಿದ್ದು ಮತ್ತೊಬ್ಬ ಮಗ ಧನಂಜಯ(3) ಸಾವು ಬದುಕಿನ ಮದ್ಯೆ ಹೋರಾಡುತ್ತಿದ್ದಾನೆ.
ಕಂದಮ್ಮಗಳು ತಪ್ಪಿಸಿಕೊಳ್ಳಲು ಮುಂದಾದಾಗ ಅವರನ್ನು ಕಟ್ಟಿ ಹಾಕಿ ಸೀಮೆ ಎಣ್ಣೆ ಸುರಿದು ತಾಯಿಯೇ ಬೆಂಕಿ ಹಚ್ಚಿದ್ದಾಳೆ. ನಂತರ ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯಲ್ಲಿ ಗಂಡ ಮತ್ತು ಅತ್ತೆ ಮಾವಂದಿರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು, ದೀಕ್ಷಾ ಪೋಷಕರು ಆರೋಪಿಸಿದ್ದಾರೆ. ಈ ಕುರಿತು ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಕೆ ನಡೆಸಿದ್ದಾರೆ.