ನಾಗರಾಜ್ ಎಸ್ ಮಡಿವಾಳರ್
ಲಿಂಗಸಗೂರು : ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸತತವಾಗಿ ಮಳೆ ಬರುತ್ತಿರುವ ಕಾರಣ ಸರಕಾರದ ಆದೇಶದಂತೆ ಮುಂಜಾಗೃತಕ್ರಮವಾಗಿ
ಲಿಂಗಸುಗೂರು, ಸಿಂಧನೂರು ಮತ್ತು ಮಸ್ಕಿ ತಾಲೂಕಿನ ಶಾಲೆಗಳಿಗೆ ಇಂದಿನಿಂದ ಎರೆಡು ದಿನ ರಜೆ ಯನ್ನು ರಾಯಚೂರು ಜಿಲ್ಲಾಧಿಕಾರಿಗಳಾದ
ಡಾ.ಅವಿನಾಶ್ ಮೆನನ್ ರಾಜೇಂದ್ರನ್, ರವರು ರಜೆ ಘೋಷಣೆ ಮಾಡಿದ್ದಾರೆ.
2021-22ನೇ ಶೈಕ್ಷಣಿಕ ಸಾಲಿನಲ್ಲಿ ಪೂರ್ವ ಪ್ರಾಥಮಿಕ ಹಾಗೂ 1 ರಿಂದ 10ನೇ ತರಗತಿ ಎಲ್ಲಾ ಶಾಲೆಗಳನ್ನು ಕೋವಿಡ್-19 ರ ನಂತರ ಭೌತಿಕವಾಗಿ ಪ್ರಾರಂಭಿಸಿದ್ದು, ಶಾಲೆಗಳು ನಿರಂತರವಾಗಿ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತವೆ. ನಿರಂತರವಾಗಿ ಮಳೆ ಬೀಳುತ್ತಿರುವ ಪ್ರಯುಕ್ತ ವಿದ್ಯಾರ್ಥಿಗಳು ಶಾಲೆಗೆ ಬಂದು ಹೋಗಲು ತೊಂದರೆಯಬಹುದಾಗಿರುತ್ತದೆ. ಈ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ
ರಜಾ ಘೋಷಣೆ ಮಾಡಿದ ದಿನಗಳ ಶೈಕ್ಷಣಿಕ ಚಟುವಟಿಕೆಗಳನ್ನು ಮುಂದಿನ ದಿನಗಳಲ್ಲಿ ಸರಿದೂಗಿಸುವ ಷರತ್ತಿಗೊಳಪಟ್ಟು ರಜೆ ಘೋಷಣೆ ಮಾಡಲಾಗಿದೆ ಎಂದು ಲಿಂಗಸಗೂರು ತಹಶೀಲ್ದಾರ ಶಂಶಾಲಾಮ್ ರವರು ಮಾಹಿತಿ ನೀಡಿದ್ದಾರೆ.