ವರದಿ ಎನ್ ಶಾಮೀದ್ ತಾವರಗೇರಾ
ತಾವರಗೇರಾ : ಪಟ್ಟಣ ಪಂಚಾಯತ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ತಿರಸ್ಕರಿಸಿ ನಾಗರಿಕರ ಸಮಿತಿಯಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ತೀರ್ಮಾನದಿಂದಾಗಿ ಪ್ರಮುಖ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ಮುಖಂಡರುಗಳು ಸರಣಿ ಸಭೆಗಳನ್ನು ನಡೆಸಲು ಮುಂದಾಗಿವೆ.
ಕಾಂಗ್ರೆಸ್: ಸೋಮವಾರ ಬೆಳಿಗ್ಗೆ 10 ಗಂಟೆಗೆ ಸ್ಥಳೀಯ ಮೇಗಾ ಫಂಕ್ಷನ್ ಹಾಲ್ ನಲ್ಲಿ ಕಾಂಗ್ರೆಸ್ ಪಕ್ಷದ ಪೂರ್ವಭಾವಿ ಸಭೆ ಜರುಗಲಿದೆ ಎಂದು ತಾಲೂಕ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಡಾ.ಶಾಮೀದ್ ದೋಟಿಹಾಳ ತಿಳಿಸಿದ್ದು, ಸಭೆಗೆ ಟಿಕೇಟ್ ಆಕಾಂಕ್ಷಿಗಳು ಪಕ್ಷದ ಮುಖಂಡರು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಭೆಗೆ ಆಗಮಿಸಬೇಕೆಂದು ತಿಳಿಸಿದ್ದಾರೆ.
ಬಿಜೆಪಿ: ಅದರಂತೆ ಪಟ್ಟಣದ ಮೌನೇಶ್ವರರ ದೇವಸ್ಥಾನದಲ್ಲಿ ಬಿಜೆಪಿ ಪಕ್ಷದ ಪೂರ್ವಭಾವಿ ಸಭೆ ನಡೆಯಲಿದ್ದು ಸಭೆಗೆ ಟಿಕೇಟ್ ಆಕಾಂಕ್ಷಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕುಷ್ಟಗಿ ತಾಲೂಕ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಮಂಜುನಾಥ ಜೂಲಕುಂಟಿ ತಿಳಿಸಿದ್ದಾರೆ.