ವರದಿ ಎನ್ ಶಾಮೀದ್ ತಾವರಗೇರಾ
ತಾವರಗೇರಾ: ವೀಕೆಂಡ್ ಕಫ್ಯೂ೯ ಹಿನ್ನಲೆ ಪಟ್ಟಣದಲ್ಲಿ ನಿನ್ನೆ ರಾತ್ರಿ ಯಿಂದಲೇ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಮಾಡಲಾಗಿದ್ದು ಪೊಲೀಸ್ ಹಾಗೂ ಪಟ್ಟಣ ಪಂಚಾಯತ ಸಿಬ್ಬಂದಿ ಸೇರಿ ಪಟ್ಟಣದಲ್ಲಿ ಅನಾವಶ್ಯಕವಾಗಿ ಹೊರಗಡೆ ಬಂದವರಿಗೆ ದಂಡ ವಿಧಿಸುವ ಮೂಲಕ ಯಾರು ಬೇಕಾಬಿಟ್ಟಿ ಓಡಾಡದಂತೆ ನಿರ್ಬಂಧ ವಿಧಿಸಿರುವದು ಕಂಡು ಬಂತು.
ಈ ಸಂದರ್ಭದಲ್ಲಿ ಸ್ಥಳೀಯ ಪಿಎಸ್ಐ ವೈಶಾಲಿ ಝಳಕಿ ಮಾತನಾಡಿ ಯಾರು ಹೊರ ಬರದೇ ಕರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಸಹಕರಿಸಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಪಪಂ ಮುಖ್ಯಾಧಿಕಾರಿ ನಭೀಸಾಬ ಖುದಾನೂರ, ಆರೋಗ್ಯ ನಿರೀಕ್ಷಕ ಪ್ರಾಣೇಶ ಬಳ್ಳಾರಿ, ಪಪಂ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿಗಳಾದ ಶಂಕರ್ ಹೆಬ್ಬಲಿ, ವೀರೇಶ, ಮುದಿಯಪ್ಪ, ಹನುಮಗೌಡ, ಆನಂದ, ಮಲ್ಲಿಕಾರ್ಜುನ ಸೇರಿದಂತೆ ಇನ್ನಿತರರಿದ್ದರು.