ವರದಿ ಎನ್ ಶಾಮೀದ್ ತಾವರಗೇರಾ
ತಾವರಗೇರಾ: ರಾಯಚೂರ ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡರ ವಿರುದ್ದ ಪಟ್ಟಣದ ಸಂವಿಧಾನ ರಕ್ಷಣಾ ಸಮಿತಿ ವತಿಯಿಂದ ಶನಿವಾರದಂದು ( 05-02-2022) ತಾವರಗೇರಾ ಬಂದ್ ಗೆ ಕರೆ ನೀಡಿದ್ದಾರೆ.
ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ನಡೆದ ಸಭೆಯಲ್ಲಿ ಸಂವಿಧಾನ ರಕ್ಷಣಾ ಸಮಿತಿ ಹಾಗೂ ಪಟ್ಟಣದ ಎಲ್ಲಾ ಸಂಘಟನೆಗಳು ಪಾಲ್ಗೊಂಡು ಬಂದ್ ಗೆ ತೀರ್ಮಾನ ಕೈಗೊಂಡಿದ್ದಾರೆ.
ಈ ಸಂಧರ್ಬದಲ್ಲಿ ಮುಖಂಡರು ಮಾತನಾಡಿ ಸಂವಿಧಾನ ಶಿಲ್ಪಿ ಎಂದು ಡಾ.ಬಿ ಆರ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ನ್ಯಾಯಾಧೀಶರ ವಿರುದ್ದ, ದೇಶ ದ್ರೋಹ ಪ್ರಕರಣ ದಾಖಲು ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿ ಈ ತಾವರಗೇರಾ ಬಂದ್ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಈ ಸಂಧರ್ಬದಲ್ಲಿ ಸಂವಿಧಾನ ರಕ್ಷಣಾ ಸಮಿತಿ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.