ವರದಿ : ನಾಗರಾಜ್ ಎಸ್ ಮಡಿವಾಳರ
ರಾಜ್ಯದಲ್ಲಿ ಹಿಜಾಬ್ ಕುರಿತು ನಡೆದಿರುವ ಪರ, ವಿರೋಧದ ಮುಂಜಾಗ್ರತೆ ಹಿನ್ನೆಲೆಯಲ್ಲಿ ಪದವಿ ಕಾಲೇಜುಗಳಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ 09 ಮತ್ತು 10 ರವರೆಗೆ ಎಲ್ಲಾ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಡುವ ಸರ್ಕಾರಿ, ಅನುದಾನಿತ ಅನುದಾನ ರಹಿತ ಪದವಿ ಕಾಲೇಜುಗಳು, ಡಿಪ್ಲೊಮೊ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾತ್ರ ರಜೆಯನ್ನು ಘೋಷಿಸಲಾಗಿದೆ.ಎಂದು ಸರಕಾರದ ಆದೀನ ಕಾರ್ಯದರ್ಶಿ ಶೀತಲ್ ಹಿರೇಮಠ ರವರು ಸುತ್ತೋಲೆ ಹೊರಡಿಸಿದ್ದಾರೆ.