Friday , September 20 2024
Breaking News
Home / Breaking News / ಟ್ರ್ಯಾಕ್ಟರ್ ಪಲ್ಟಿ ನಾಲ್ವರ ಸಾವು..!

ಟ್ರ್ಯಾಕ್ಟರ್ ಪಲ್ಟಿ ನಾಲ್ವರ ಸಾವು..!

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಸಮೀಪದ ನವಲಿ ಗ್ರಾಮದ ರೈಸ್ ಟೆಕ್ನಾಲಜಿ ಪಾರ್ಕ ಬಳಿ ಟ್ರ್ಯಾಕ್ಟರವೊಂದು ಪಲ್ಟಿಯಾಗಿ ನಾಲ್ವರು ಮೃತಪಟ್ಟಿರುವ ಘಟನೆ ಜರುಗಿದೆ..!

ಮೃತರನ್ನು ಕಾರಟಗಿ ಪಟ್ಟಣದ ಇಂದಿರಾ ನಗರದ ನಿವಾಸಿಗಳಾದ ಯಮನೂರಪ್ಪ ಸಿಂಧನೂರು (55), ಅಂಬಮ್ಮ (45) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ದ್ಯಾವಮ್ಮ (60) ಶೇಶಪ್ಪ ಬಂಡಿ (40) ಇವರಿಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮೃತರು ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದ ಇಂದಿರಾನಗರದ ನಿವಾಸಿಗಳು ಎಂದು ತಿಳಿದುಬಂದಿದೆ. ಕಾರಟಗಿಯಿಂದ ಕನಕಗಿರಿ ತಾಲೂಕಿನ ಶಿರವಾರ ಗ್ರಾಮಕ್ಕೆ ಮದುವೆ ನಿಶ್ಚಯ ಮಾಡಲು ಹೊರಟಿದ್ದ ಟ್ರ್ಯಾಕ್ಟರ್ ಆಯ ತಪ್ಪಿ ಪಲ್ಟಿಯಾಗಿರುವ ಬಗ್ಗೆ ಪ್ರತ್ಯಕ್ಷದರ್ಶಿಗಳು ಸ್ಪಷ್ಟಪಡಿಸಿದ್ದಾರೆ. ಗಾಯಾಳುಗಳನ್ನು ಕಾರಟಗಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಸ್ಥಳಕ್ಕೆ ಡಿವೈಎಸ್ಪಿ ಸೇರಿದಂತೆ ಕನಕಗಿರಿ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ..!!

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!