ವರದಿ ಎನ್ ಶಾಮೀದ್ ತಾವರಗೇರಾ
ತಾವರಗೇರಾ: ಪಟ್ಟಣಕ್ಕಿಂದು ಸಚಿವರ ದಂಡೇ ಆಗಮಿಸುತ್ತಿದ್ದು ಪಟ್ಟಣದ ಬಹುದಿನಗಳ ಬೇಡಿಕೆ ಯಾಗಿದ್ದ ತುಂಗಭದ್ರಾ ಎಡದಂಡೆ ಕಾಲುವೆಯಿಂದ ನೀರು ಸರಬರಾಜು ಕಲ್ಪಿಸುವ ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭಕ್ಕೆ ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್, ನಗರಾಭಿವೃದ್ಧಿ ಸಚಿವರಾದ ಬೈರತಿ ಬಸವರಾಜ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ರಾದ ರಾಜು ಗೌಡ ಆಗಮಿಸಲ್ಲಿದ್ದು, ಸ್ಥಳೀಯ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಲೋಕಸಭೆ ಸದಸ್ಯರು ಸೇರಿದಂತೆ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ವಿವಿಧ ನಿಗಮ ಮಂಡಳಿ ಅಧ್ಯಕ್ಷರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಬೆಂಗಳೂರು ಹಾಗೂ ಪಟ್ಟಣ ಪಂಚಾಯತ ತಾವರಗೇರಾ ಇವರ ಸಹಯೋಗದಲ್ಲಿ 88.16 ಕೋಟಿ ರೂ ವೆಚ್ಚದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಲಿದೆ.