ವರದಿ ಎನ್ ಶಾಮೀದ್ ತಾವರಗೇರಾ
ತಾವರಗೇರಾ: ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಮಾಡದೇ ಕ್ಷೇತ್ರದ ಜನರ ಪರವಾಗಿ ಪ್ರಾಮಾಣಿಕ ಕಲಸ ಮಾಡುವವರೇ ನಿಜವಾದ ರಾಜಕಾರಣಿಗಳು ಎಂದು ನಗರಾಭಿವೃದ್ಧಿ ಸಚಿವರಾದ ಬಸವರಾಜ ಬೈರತಿ ಹೇಳಿದರು.
ಅವರು ಪಟ್ಟಣಕ್ಕೆ 88.16 ಕೋಟಿ ವೆಚ್ಚದಲ್ಲಿ ತುರುವಿಹಾಳ ಬಳಿ ತುಂಗಭದ್ರಾ ಎಡದಂಡೆ ಕಾಲುವೆಯಿಂದ ನೀರು ಕಲ್ಪಿಸುವ ಕಾಮಗಾರಿ ಶಂಕುಸ್ಥಾಪನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ನಂತರ ಸಂಸದರಾದ ಸಂಗಣ್ಣ ಕರಡಿ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು ಈ ಬಾರಿ ಬಜೆಟ್ ನಲ್ಲಿ ಕೊಪ್ಪಳ ಜಿಲ್ಲೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು. ನಂತರ ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ ಸಿಂಗ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾದ ರಾಜು ಗೌಡ ಹಾಗೂ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಶರಣು ತಳ್ಳಿಕೇರಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಮಾತನಾಡಿ ಪಟ್ಟಣದ ಬಹುದಿನಗಳ ಬೇಡಿಕೆಯಾಗಿದ್ದ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಲಾಗಿದ್ದು, ಇನ್ನು ಕೆಲವೇ ದಿನಗಳಲ್ಲಿ ಯೋಜನೆ ಕಾರ್ಯರೂಪಕ್ಕೆ ಬರಲಿದೆ ಎಂದರು.
ಈ ಸಂದರ್ಭದಲ್ಲಿ ಕುಷ್ಟಗಿ ತಹಶಿಲ್ದಾರರಾದ ಎಂ ಸಿದ್ದೇಶ, ಧಾರವಾಡ ದ ಒಳಚರಂಡಿ ಮಂಡಳಿಯ ಮುಖ್ಯ ಅಭಿಯಂತರಾದ ಕೆ ವಿ ಶ್ರೀ ಕೇಶವ ಹಾಗೂ ಸ್ಥಳೀಯ ಪಟ್ಟಣ ಪಂಚಾಯತ ಸದಸ್ಯರು ಉಪಸ್ಥಿತರಿದ್ದರು.
ಮನವಿ: ಪಟ್ಟಣಕ್ಕೆ ಆಗಮಿಸಿದ ಸಚಿವರಿಗೆ ಸಂವಿಧಾನ ಹಿತರಕ್ಷಣಾ ಸಮಿತಿಯವರು ಸರ್ಕಾರಿ ಮತ್ತು ಅರೇ ಸರ್ಕಾರಿ ಜಮೀನುಗಳಲ್ಲಿ ಕೋಟಿ ಗಟ್ಟಲೇ ಬಾಳುವ ಜಮೀನನ್ನು ಅಕ್ರಮ ಮಾಡಿಕೊಂಡವರ ವಿರುದ್ದ ಕ್ರಮ ಕೈಗೊಳಲ್ಲು ಒತ್ತಾಯಿಸಿ ಮನವಿ ಸಲ್ಲಿಸಿದರು.
ಎಬಿವಿಪಿ ಸಂಘಟನೆ: ಎಬಿವಿಪಿ ಕಾರ್ಯಕರ್ತರು ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರ ನೀಡ ಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ ಸಿಂಗ್ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಬಸವರಾಜ ಬೈರತಿ ಸಂಸದ ಸಂಗಣ್ಣ ಕರಡಿ, ಮಾಜಿ ಶಾಸಕರಾದ ದೊಡ್ಡನಗೌಡ ಪಾಟರ್, ಶರಣು ತಳ್ಳಿಕೇರಿ ಸೇರಿದಂತೆ ಎಬಿವಿಪಿ ಕಾರ್ಯಕರ್ತರು ಉಪಸ್ಥಿತಿ ರಿದ್ದರು.
ಸನ್ಮಾನ: ಪಟ್ಟಣಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ ಸಿಂಗ್ ಇವರಿಗೆ ಸ್ಥಳೀಯ ರಜಪೂತ ಸಮಾಜದ ವರು ಶಾಮೀದ ಅಲಿ ವೃತ್ತದಲ್ಲಿ ಹಾಗೂ ಹಾಲುಮತ ಸಮಾಜದವರು ಕನಕದಾಸ ವೃತ್ತದಲ್ಲಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಮತ್ತು ಎರಡು ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸೂಕ್ತ ಬಂದೋಬಸ್ಥ ಕಲ್ಪಿಸಲಾಗಿತ್ತು.