ವರದಿ ಎನ್ ಶಾಮೀದ್ ತಾವರಗೇರಾ
ತಾವರಗೇರಾ: ಪಟ್ಟಣದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.
ಮೃತ ವಿದ್ಯಾರ್ಥಿನಿಯನ್ನು ಸಮೀಪದ ಹಿರೇತೆಮ್ಮಿನಾಳ ಗ್ರಾಮದ ಅಕ್ಷತಾ (17) ಎಂದು ಗುರುತಿಸಲಾಗಿದೆ. ಕಳೆದ ಒಂದು ವರ್ಷದಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಆಸ್ಪತ್ರೆಗೆ ತೋರಿಸಿದರು ಗುಣಮುಕಳಾಗದೇ ನೊಂದಿದ್ದಳು, ಶುಕ್ರವಾರದಂದು ಹಿರೇತೆಮ್ಮಿನಾಳ ಗ್ರಾಮದ ತೋಟದ ಮನೆಯಲ್ಲಿದ್ದ ಕ್ರಿಮಿನಾಶಕ ಸೇವಿಸಿದ್ದಾಳೆ, ಇದನ್ನು ಕಂಡ ಪಾಲಕರು ತಾವರಗೇರಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಗಂಗಾವತಿಯ ಆಸ್ಪತ್ರೆಗೆ ಸೇರಿಸಿದಾಗ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ. ತಂದೆ ದುರುಗಪ್ಪ ಕನ್ನಾಳ ದೂರಿನ ಅನ್ವಯ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.