Thursday , September 19 2024
Breaking News
Home / Breaking News / ಸೆ.14 ರಂದು ಮುದಗಲ್ ಬಂದ್

ಸೆ.14 ರಂದು ಮುದಗಲ್ ಬಂದ್

ನಾಗರಾಜ್ ಎಸ್ ಮಡಿವಾಳರ್ 
ಮುದಗಲ್ : ಸೆಪ್ಟೆಂಬರ್ 14ರಂದು ಮುದಗಲ್ ಬಂದ್ ಗೆ ದಲಿತಪರ ಸಂಘಟನೆಗಳು ಕರೆ ನೀಡಿವೆ.
ಪಟ್ಟಣದ ಖಾಸಗಿ ಹೋಟೆಲ್ ನಲ್ಲಿ ಮಾತನಾಡಿದ ದಲಿತ ಮುಖಂಡ ಶರಣಪ್ಪ ಕಟ್ಟಿಮನಿ ಪಟ್ಟಣದ ಕೆಲವು ಖಾಸಗಿ ಹಾಗೂ ಸರಕಾರಿ ಶಾಲೆಗಳಲ್ಲಿ  ಕಳೆದ ಆಗಸ್ಟ್ 15 ರಂದು  ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ವೇಳೆ  ಡಾ. ಬಿ ಆರ್ ಅಂಬೇಡ್ಕರ್ ರವರ ಫೋಟೋ ಇಡದೇ ಧ್ವಜಾರೋಹಣ ಮಾಡಿ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿ ಅಸ್ಪೃಶ್ಯತೆಯನ್ನ ಎತ್ತಿ ತೋರಿಸುವ ದುರ್ಘಟನೆ ನಡೆದಿತ್ತು ಮರುದಿನವೇ ಅಂದರೆ ಆಗಸ್ಟ್ 16ರಂದು ದಲಿತ ಪರ ಸಂಘಟನೆ ಹಾಗೂ ಕನ್ನಡಪರ ಸಂಘಟನೆಗಳು ಜಂಟಿಯಾಗಿ ಪುರಸಭೆ ಆವರಣದಲ್ಲಿ ಬೃಹತ್ ಪ್ರತಿಭಟನೆ ಮೂಲಕ ಕ್ರಮಕ್ಕೆ ಒತ್ತಾಯ ಮಾಡಲಾಗಿತ್ತು. ಪ್ರತಿಭಟನಾ ಸ್ಥಳಕ್ಕೆ  ಕ್ಷೇತ್ರದ ಶಿಕ್ಷಣ ಅಧಿಕಾರಿಗಳು ಹಾಗೂ ಸ್ಥಳೀಯ ಠಾಣೆಯ ಪಿಎಸ್ಐ ರವರು ಜಂಟಿಯಾಗಿ ಭೇಟಿ ನೀಡಿ  ನಾವು  ಮೇಲಾಧಿಕಾರಿಗಳಿಗೆ ಈ ಕುರಿತು ವರದಿ ನೀಡಿ 8 ದಿನಗಳಲ್ಲಿ ಕಾನೂನು ಕ್ರಮಕ್ಕೆ ಮುಂದಾಗುತ್ತೇವೆ ಎಂದು ಭರವಸೆ ನೀಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ವರದಿ ನೀಡಿದ್ದಾರೆ ವರದಿ ನೀಡಿ 20ದಿನ ವಾದರೂ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ದಲಿತಪರ ಸಂಘಟನೆಗಳು ಶಿಕ್ಷಣ ಇಲಾಖೆ ಆಯುಕ್ತರನ್ನು ಸಂಪರ್ಕಿಸಿದಾಗ ಅವರು  ಉಡಾಫೆ ಉತ್ತರ ನೀಡುತ್ತಿದ್ದಾರೆ, ಶಿಕ್ಷಣ ಇಲಾಖೆಯ ಆಯುಕ್ತರು ಇದರಲ್ಲಿ ಶಾಮೀಲಾಗಿ ಅಸ್ಪೃಶ್ಯತೆ ಆಚರಣೆಗೆ ಬೆಂಬಲ ನೀಡುತ್ತಿದ್ದಾರೆ ಅಂಬೇಡ್ಕರ್ ರವರಿಗೆ ಅವಮಾನ ಮಾಡಿದ  ಶಾಲೆಗಳ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗದ  ಕಾರಣ ಇದೆ 14 ರಂದು ಮುದಗಲ್ ಪಟ್ಟಣದ ಸಂಪೂರ್ಣ ಬಂದ್ ಗೆ ಕರೆ ನೀಡಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮುಂದಾಗಲು ಪ್ರತಿಭಟನೆ ಮಾಡಲಾಗುತ್ತದೆ  ಪಟ್ಟಣದ ಸಾರ್ವಜನಿಕರು ಸಹಕರಿಸಬೇಕು ಎಂದರು. ಈ ಸಂದರ್ಭದಲ್ಲಿ ನಿರುಪಾದಿ ರೇವಣಕಿ, ಬಸವರಾಜ ಬಂಕದಮನಿ, ಸಂತೋಷ ಪೂಜಾರಿ,ಸಂಗಪ್ಪ ರಾಮಾತ್ನಾಳ,ರಮೇಶ್ ತಿಮ್ಮಾಪುರ, ಇದ್ದರು.

About Nagaraj M

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!