ವರದಿ ಎನ್ ಶಾಮೀದ್ ತಾವರಗೇರಾ
ತಾವರಗೇರಾ: ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ವಿವಿಧ ತೆರಿಗೆಗಳಾದ ಆಸ್ತಿ ತೆರಿಗೆ, ನೀರಿನ ತೆರಿಗೆ, ವಾಣಿಜ್ಯ ಮಳಿಗೆಗಳ ಬಾಡಿಗೆ ಅಭಿವೃದ್ಧಿ ಶುಲ್ಕಗಳು ಮತ್ತು ಇತರೆ ತೆರಿಗೆ ಗಳನ್ನು ಹೊಸದಾಗಿ ಸೃಷ್ಟಿಸಲಾದ ಭಾರತ್ ಬಿಲ್ ಪಾವತಿ ವ್ಯವಸ್ಥೆಯನ್ನು ಸಾರ್ವಜನಿಕರು ಆನ್ ಲೈನ್ ಮುಖಾಂತರ ಪೌರಡಳಿತ ಸೇವೆಗಳ ಹಣ ಪಾವತಿಸಿ ಸಕಾಲದಲ್ಲಿ ಸೇವೆಗಳನ್ನು ಪಡೆಯುವಂತೆ ಪಪಂ ಮುಖ್ಯಾಧಿಕಾರಿ ಪಟ್ಟಣದ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.