ವರದಿ ಎನ್ ಶಾಮೀದ್ ತಾವರಗೇರಾ
ತಾವರಗೇರಾ:-ಪಟ್ಟಣದ ಶಾಮೀದಲಿ ದರ್ಗಾ ವ್ಯಾಪ್ತಿಯಲ್ಲಿ ಅಕ್ರಮ ಕಟ್ಟಡ ನಿರ್ಮಾಣ ವಿರೋಧಿಸಿ ಸ್ಥಳೀಯ ಸಾರ್ವಜನಿಕರು ಕಾಮಗಾರಿ ತಡೆಹಿಡಿದು ಕಂದಾಯ ಇಲಾಖೆಯ ಅಧಿಕಾರಿಗಳ ಪರಿಶೀಲನೆ ಮಾಡುವಂತೆ ಆಗ್ರಹಿಸಿದ ಘಟನೆಯೊಂದು ಸೋಮವಾರದಂದು ನಡೆದಿದೆ.
ಕಳೆದ ಕೆಲವು ದಿನಗಳಿಂದ ಪಟ್ಟಣದ ಶಾಮೀದಲಿ ದರ್ಗಾ ವ್ಯಾಪ್ತಿಯಲ್ಲಿ ರಾತ್ರೋರಾತ್ರಿ ಕಟ್ಟಡ ನಿರ್ಮಾಣ ಕಾಮಗಾರಿ ಶುರುವಾಗಿದ್ದು ಇದು ಸಾರ್ವಜನಿಕರ ಚರ್ಚೆಗೆ ಗ್ರಾಸವಾಗಿತ್ತು ಇಂದು ದರ್ಗಾದ ಭಕ್ತರು ಅಕ್ರಮ ಕಾಮಗಾರಿ ತಡೆಹಿಡಿದು ಕಂದಾಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರುವುದರ ಜೊತೆಗೆ ಪಟ್ಟಣ ಪಂಚಾಯಿತಿ ಆಡಳಿತ ಅಧಿಕಾರಿಗಳು ಹಾಗೂ ದರ್ಗಾ ಕಮೀಟಿಯ ಅಧಿಕಾರಿ, ತಹಶೀಲ್ದಾರ್ ಇದ್ದು ಅವರ ಗಮನಕ್ಕೂ ತರದೆ ಕಟ್ಟಡ ಕಾಮಗಾರಿ ಆರಂಭಿಸಿದ್ದು ಅನುಮಾನಕ್ಕೆ ಕಾರಣವಾಗಿದೆ ಎಂದು ವಿವಿಧ ಸಮಾಜದ ಮುಖಂಡರು ಆರೋಪಿಸಿದ್ದಾರೆ.
ನಂತರ ವಿಷಯ ತಿಳಿಯುತ್ತಿದ್ದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಕುಷ್ಟಗಿ ಸಿಪಿಐ ಎನ್ ಆರ್ ನಿಂಗಪ್ಪ ಆಗಮಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಜೊತೆಗೆ ಮಾತುಕತೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ವಿವಿಧ ಸಮಾಜದ ಮುಖಂಡರು ಭಾಗವಹಿಸಿದ್ದರು.