ವರದಿ ಎನ್ ಶಾಮೀದ್ ತಾವರಗೇರಾ
ಕೊಪ್ಪಳ:– ಚುನಾವಣಾ ವೇಳಾಪಟ್ಟಿ ಘೋಷಣೆಯಾಗುತ್ತಿದ್ದಂತೆ, ಚುನಾವಣಾ ಕಣ ರಂಗೇರಿದೆ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಿಗೆ ಈಗಾಗಲೇ ಕಾಂಗ್ರೆಸ್ ನಾಲ್ಕು ಕ್ಷೇತ್ರದ ಅಭ್ಯರ್ಥಿಯನ್ನು ಮೊದಲ ಪಟ್ಟಿಯಲ್ಲಿ ಘೋಷಿಸಿದ್ದು ತೀವ್ರ ಕುತೂಹಲ ಕೆರಳಿಸಿದ ಗಂಗಾವತಿಯ ವಿಧಾನಸಭಾ ಕ್ಷೇತ್ರಕ್ಕೆ ಎರಡನೇ ಪಟ್ಟಿಯಲ್ಲಿ ನಿರೀಕ್ಷೆಯಂತೆಯೇ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರಿಗೆ ಟಿಕೆಟ್ ಖಚಿತವಾದ ಬಗ್ಗೆ ತಿಳಿದುಬಂದಿದೆ.
ಜಿಲ್ಲೆಯಲ್ಲಿ ತೀವ್ರ ಕುತೂಹಲ ಕೇಳಿಸಿರುವ ಗಂಗಾವತಿ ವಿಧಾನಸಭಾ ಕ್ಷೇತ್ರ ಈ ಭಾರಿ ಕುತೂಹಲಕ್ಕೆ ಕಾರಣವಾಗಿದೆ ಗಣಿ ದಣಿ ಜನಾರ್ಧನ್ ರೆಡ್ಡಿ ಅವರ ಗಂಗಾವತಿ ಪ್ರವೇಶದಿಂದಾಗಿ ಕ್ಷೇತ್ರದಲ್ಲಿ ಸಂಚಲನ ಮೂಡಿದೆ ಈ ಬಾರಿ ಕಾಂಗ್ರೆಸ್ ಬಿಜೆಪಿ ಹಾಗೂ ಜನಾರ್ದನ್ ರೆಡ್ಡಿ ಅವರ ಮಧ್ಯೆ ಸ್ಪರ್ಧೆ ಏರ್ಪಟ್ಟಿದ್ದು ಮತದಾರರು ಯಾರ ಪರ ಒಲವು ತೋರಿಸಲಿದ್ದಾರೆ ಎಂಬುದು ಸಾರ್ವಜನಿಕರ ಕುತೂಹಲಕ್ಕೆ ಕಾರಣವಾಗಿದೆ.
ಕಾಂಗ್ರೆಸ್ ನಿಂದ ಈ ಬಾರಿ ಎಚ್ ಆರ್ ಶ್ರೀನಾಥ್ ಹಾಗೂ ಮಾಜಿ ಸಚಿವ ಮಲ್ಲಿಕಾರ್ಜುನ್ ನಾಗಪ್ಪ ಅವರು ಕೂಡ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾಗಿದ್ದರು ಆದರೆ ಈಗ ಇಕ್ಬಾಲ್ ಅನ್ಸಾರಿ ಅವರಿಗೆ ಟಿಕೆಟ್ ಖಚಿತವಾಗುತ್ತಿದ್ದಂತೆ ಅವರ ನಡೆ ಹೇಗಿರಲಿದೆ ಎಂಬುದು ಈಗ ಚರ್ಚಿತ ವಿಷಯವಾಗಿದೆ.