Thursday , September 19 2024
Breaking News
Home / Breaking News / ಕುಷ್ಟಗಿ: ಬಿಜೆಪಿ ಬಲ ಪ್ರದರ್ಶನದೊಂದಿಗೆ ನಾಮ ಪತ್ರ ಸಲ್ಲಿಕೆ..

ಕುಷ್ಟಗಿ: ಬಿಜೆಪಿ ಬಲ ಪ್ರದರ್ಶನದೊಂದಿಗೆ ನಾಮ ಪತ್ರ ಸಲ್ಲಿಕೆ..

ವರದಿ ಎನ್ ಶಾಮೀದ್ ತಾವರಗೇರಾ

ಕುಷ್ಟಗಿ: ಬೃಹತ್ ಜನಸಾಗರದ ಮೆರವಣಿಗೆಯೊಂದಿಗೆ ಬಿಜೆಪಿ ಅಭ್ಯರ್ಥಿಯಾದ ದೊಡ್ಡನಗೌಡ ಎಚ್ ಪಾಟೀಲ್ ಮಂಗಳವಾರ ನಾಮಪತ್ರ ಸಲ್ಲಿಸಿದ್ದು ಈ ಸಂದರ್ಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಜನರು ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಪಟ್ಟಣದ ಅಡಿವಿರಾವ್ ದೇವಸ್ಥಾನದಿಂದ ಮೆರವಣಿಗೆ ಮೂಲಕ ಭಾರಿ ಸಂಖ್ಯೆಯ ಅಭಿಮಾನಿಗಳೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮೆರವಣಿಗೆಯಲ್ಲಿ ಸಂಸದರಾದ ಸಂಗಣ್ಣ ಕರಡಿ, ಬಿಜೆಪಿ ಜಿಲ್ಲಾ ಕಾರ್ಯಾಧ್ಯಕ್ಷರಾದ ಎಚ್ ಗಿರೇಗೌಡರ್, ತಾಲೂಕು ಬಿಜೆಪಿ ಅಧ್ಯಕ್ಷರಾದ ಬಸವರಾಜ್ ಹಳ್ಳೂರ್, ಮುಖಂಡರಾದ ದೇವೇಂದ್ರಪ್ಪ ಬಳೂಟಿಗಿ, ಪ್ರಭಾಕರ್ ಚಿನಿ ಸೇರಿದಂತೆ ಅನೇಕ ಮುಖಂಡರು ಪಾಲ್ಗೊಂಡಿದ್ದರು.

ಪಟ್ಟಣದಲ್ಲಿ ಎಲ್ಲಿಂದರಲ್ಲಿ ಬಿಜೆಪಿ ಕಾರ್ಯಕರ್ತರೇ ಕಂಡುಬಂದಿದ್ದು, ಮೆರವಣಿಗೆ ಸಂದರ್ಭದಲ್ಲಿ ಸ್ವಲ್ಪಹೊತ್ತು ಟ್ರಾಫಿಕ್ ಜಾಮ್ ಆಗಿದ್ದು ಕಂಡು ಬಂತು.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!