ವರದಿ ಎನ್ ಶಾಮೀದ್ ತಾವರಗೇರಾ
ತಾವರಗೇರಾ: ಮಾನಸಿಕ ಖಿನ್ನತೆ ಯಿಂದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದಲ್ಲಿ ಜರುಗಿದೆ.
ಮೃತ ವ್ಯಕ್ತಿಯನ್ನು ಪಟ್ಟಣದ ರಾಘವೇಂದ್ರ ಸಿದ್ದಪ್ಲ ಐಲಿ (43) ಎಂದು ಗುರುತಿಸಲಾಗಿದ್ದು ಮೃತ ವ್ಯಕ್ತಿಯು ಕಳೆದ ಒಂದು ವರ್ಷದಿಂದ ತನ್ನ ಸಹೋದರ ಹಾಗು ತಾಯಿ ತೀರಿಕೊಂಡ ಹಿನ್ನಲೆಯಲ್ಲಿ ಜೀವನದಲ್ಲಿ ಜಿಗುಪ್ಸೆ ಹೊಂದಿ ತಮ್ಮ ಮನೆಯಲ್ಲಿಯೇ ನೇಣು ಹಾಕಿಕೊಂಡು ಮೃತಪಟ್ಟಿದ್ದಾನೆ.
ಈ ಕುರಿತು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.