Thursday , September 19 2024
Breaking News
Home / Breaking News / ಶಾಲಾ ಬಸ್ಸಿಗೆ ಸಿಲುಕಿ, ಮಗು ಸಾವು..!

ಶಾಲಾ ಬಸ್ಸಿಗೆ ಸಿಲುಕಿ, ಮಗು ಸಾವು..!

ವರದಿ ಎನ್ ಶಾಮೀದ್ ತಾವರಗೇರಾ

ಕುಷ್ಟಗಿ:- ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ, ಶಾಲಾ ಬಸ್ಸಿನ ಗಾಲಿಗೆ ಸಿಲುಕಿ 3 ವರ್ಷದ ಮಗುವೊಂದು ಸಾವನ್ನಪ್ಪಿದ ಘಟನೆ ತಾಲೂಕಿನ ಗೋತಗಿ ಗ್ರಾಮದಲ್ಲಿ ನಡೆದಿದೆ.

ಮೃತ ಮಗುವನ್ನು ಅದೇ ಗ್ರಾಮದ ಬಸವರಾಜ ಬಾವಿಕಟ್ಟಿ ಅವರ ಮಗಳಾದ ಚೈತ್ರಾ (03) ಎಂದು ಗುರುತಿಸಲಾಗಿದ್ದು .

ಓತಗೇರಿ ಗ್ರಾಮದ ಖಾಸಗಿ ಪ್ರಾಥಮಿಕ ಶಾಲೆಯ ಬಸ್ಸು ಗೋತಗಿ ಗ್ರಾಮದ ಮಕ್ಕಳಿಗೆ ಶಾಲೆಗೆ ಕರೆದೊಯ್ಯುಲು ಆಗಮಿಸಿದ ಸಂದರ್ಭದಲ್ಲಿ ತನ್ನ ಅಕ್ಕನನ್ನು ಬಸ್ಸಿಗೆ ಹತ್ತಿಸಲು ಬಂದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಈ ಕುರಿತಂತೆ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಮಗುವಿನ ಮೃತ ದೇಹವನ್ನು , ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ತರಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!